ಬಿಸಿಲಿನ ನಗರಿ ಕಲಬುರಗಿಯಲ್ಲಿ ಈ ಬಾರಿ ಚಳಿಯ ಪ್ರಮಾಣ ಹೆಚ್ಚಳವಾಗಿದ್ದು, ಬೆಳಗಿನ ಸಮಯ ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಉಷ್ಣಾಂಶ ಕಡಿಮೆ ಆಗಿರುವ ಕಾರಣ ಬೆಳಗ್ಗೆ ವಾಯುವಿಹಾರಕ್ಕೆ ತೆರಳುವವರ ಪ್ರಮಾಣ ಕಡಿಮೆ ಆಗಿದೆ. ಚಳಿ ಮತ್ತು ಮಂಜಿನ ಪ್ರಮಾಣ ಹೆಚ್ಚಾಗಿದ್ದು, ರೈತರು ಬೆಳಗ್ಗೆ ಜಮೀನುಗಳಿಗೆ ತೆರಳುವುದು ಕಷ್ಟಕರವಾಗಿದ್ದು ಕೃಷಿ ಚಟುವಟಿಕೆಗಳಿಗೂ ತೊಂದರೆ ಆಗಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಕಡಿಮೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement