Advertisement
ಹವಾಮಾನ

11 ರಾಜ್ಯಗಳಲ್ಲಿ ದಟ್ಟವಾದ ಮಂಜು – ಶೀತಗಾಳಿಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Share

ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ತಾಪಮಾನ ಕುಸಿತದ ಹಿನ್ನಲೆಯಲ್ಲಿ ತೀವ್ರ ಮಂಜು ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಬೆಳಗಿನ ಸಮಯದಲ್ಲಿ ಮಂಜಿನ ಪ್ರಭಾವ ಹೆಚ್ಚಾಗಿದ್ದು, ಇದು ಗೋಚರತೆಯ ಮೇಲೆ ಪರಿಣಾಮ ಬೀರುತ್ತದೆ. ಪ್ರಯಾಣಿಕರು ನಿಧಾನವಾಗಿ ವಾಹನ ಚಲಾಯಿಸಲು ಮತ್ತು ಫಾಗ್‌ ಲೈಟ್ ಬಳಸಲು ಸೂಚಿಸಲಾಗಿದೆ.‌

ಈಶಾನ್ಯ ಉತ್ತರ ಪ್ರದೇಶದಲ್ಲಿ ತುಂಬಾ ದಟ್ಟವಾದ ಮಂಜು ಬೀಳುವ ನೀರೀಕ್ಷೆಯಿದೆ ಮತ್ತು ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣೀಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ಉತ್ತರಾಖಂಡದ ವಿವಿಧ ಪ್ರದೇಶಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮಂಜಿನ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡಬೇಕು ಮತ್ತು ವಾಹನ ಚಲಾಯಿಸುವಾಗ ಫಾಗ್ ಲೈಟ್‌  ಬಳಸಬೇಕು ಎಂದು ಐಎಮ್ ಡಿ ಸಲಹೆ ನೀಡಿದೆ.

ಮಧ್ಯಪ್ರದೇಶ-ಮಹಾರಾಷ್ಟ್ರದಲ್ಲಿ ಶೀತಗಾಳಿ ಎಚ್ಚರಿಕೆ:  ಕಳೆದ ಐದು ದಿನಗಳಿಂದ ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ತೆಲಂಗಾಣ ಮತ್ತು ಉತ್ತರ ಒಡಿಶಾದಲ್ಲಿ ಶೀತಗಾಳಿಯ ಪರಿಣಾಮ ಬೀರುತ್ತಿದೆ ಮತ್ತು ಅದು ಮುಂದುವರಿಯುವ ನಿರೀಕ್ಷೆಯಿದೆ. ಈ ಪ್ರದೇಶಗಳು ಮುಂದಿನ ಎರಡು ಮೂರು ದಿನಗಳಲ್ಲಿ ಚಳಿಯಿಂದ ಸ್ವಲ್ಪ ಪರಿಹಾರ ಪಡೆಯಬಹುದು. ಉತ್ತರ ಭಾರತದಲ್ಲಿ ತಾಪಮಾನವು ಸಾಮಾನ್ಯವಾಗಿರುವು ಸಾಧ್ಯತೆಯಿದೆ.  ಪಂಜಾಬ್ ಹರಿಯಾಣ ಚಂಡೀಗಢ, ಹಿಮಾಚಲ ಪ್ರದೇಶ ಪೂರ್ವ ಉತ್ತರ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ದಟ್ಟವಾದ ಮಂಜು ಕಂಡುಬರಬಹುದು.

ಪಂಜಾಬ್ ಹರಿಯಾಣದಲ್ಲಿ ತೀವ್ರ ಚಳಿ: ಪಂಜಾಬ್ ಮತ್ತು ಹರಿಯಾಣದಲ್ಲಿ ತೀವ್ರ ಚಳಿ ಇದೆ. ಮಂಗಳವಾರ ಎರಡೂ ನೆರೆಯ ರಾಜ್ಯಗಳಲ್ಲಿ ಅತ್ಯಂತ ಶೀತ ಸ್ಥಳವಾಗಿದ್ದು, ಕನಿಷ್ಠ ತಾಪಮಾನ 3.6 ಡಿಗ್ರಿ ಆಗಿತ್ತು. ಹವಾಮಾನ ಇಲಾಖೆಯ ವರದಿಯ ಪ್ರಕಾರ ಅಮೃತಸರದಲ್ಲಿ ಕನಿಷ್ಠ ತಾಪಾಮನಾ 6.1 ಡಿಗ್ರಿ ಲುಧಿಯಾದಲ್ಲಿ 9.2 ಡಿಗ್ರಿ ಮತ್ತು  ಪಟಿಯಾಲದಲ್ಲಿ 10.1 ಡಿಗ್ರಿ ದಾಖಲಾಗಿದೆ. ಚಂಡೀಗಢದಲ್ಲಿಯೂ ಸಹ ಶೀತ ಅಲೆಯ ಪರಿಣಾಮ ಕಂಡುಬಂದಿದ್ದು, ತಾಪಾಮನಾ 8.6 ಡಿಗ್ರಿ ದಾಖಲಾಗಿದೆ. ಹರಿಯಾಣದಲ್ಲಿ ಅಂಬಾಲಾದಲ್ಲಿ ಕನಿಷ್ಠ ತಾಪಮಾನ 10.9 ಡಿಗ್ರಿ ಮತ್ತು ಹಿಸಾರ್ ನಲ್ಲಿ 6.7́ಡಿಗ್ರಿ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

19 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

19 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago