ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳವರೆಗೆ ಚಳಿ ಮುಂದುವರಿಯಲಿದೆ. ಕನಿಷ್ಟ 16 ರಿಂದ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ನಿರ್ದೇಶಕರಾದ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚಿನ ಗರಿಷ್ಠ ಉಷ್ಣಾಂಶ 34.5 ಡಿಗ್ರಿ ಸೆಲ್ಸಿಯಸ್ ಪಣಂಬೂರಿನಲ್ಲಿ, ಅತಿ ಕಡಿಮೆ 11.5 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ. ಕೊಡಗು, ಮೈಸೂರು, ಹಾಸನ ಜಿಲ್ಲೆಗಳ ಒಂದೆರೆಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…