ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ಚಳಿ ಹೆಚ್ಚಾಗಿದೆ. ಇದೀಗ ಉತ್ತರ ಭಾರತದಿಂದ ದಕ್ಷಿಣ ಭಾರತದತ್ತ ಚಳಿಗಾಳಿ ಬೀಸತೊಡಗಿದ್ದು, ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗುತ್ತಿದೆ. ಬೀದರ್ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 6.7 ಡಿಗ್ರಿ ಸೆಲ್ಷಿಯಸ್‌ಗೆ ಇಳಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎಂಬ ನಿರೀಕ್ಷೆ ಇದೆ.
ಈ ತಿಂಗಳ ಕೊನೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಹಿಮಾಪಾತವಾಗಬಹುದು .ಇಂದಿನಿಂದ 2 ದಿನಗಳವರೆಗೆ ಅರುಣಾಚಾಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ. ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪಂಜಾಬ್‌ನ ಉತ್ತರ ಭಾಗಗಳು ಮತ್ತು ಹರಿಯಾಣ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ಮತ್ತು 27 ರಂದು ಆಲಿಕಲ್ಲು ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.