MIRROR FOCUS

ಕುಸಿದ ಅಡಿಕೆ ಮಾರುಕಟ್ಟೆ | ರಾಜ್ಯದಲ್ಲಿ ಅಡಿಕೆಗೆ ಬೆಂಬಲ ಬೆಲೆ ಘೋಷಿಸಲು ಒತ್ತಾಯ | ಮೇಘಾಲಯದಲ್ಲೂ ಬೆಂಬಲ ಬೆಲೆ ಚರ್ಚೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಮಾರುಕಟ್ಟೆ ಕುಸಿತವಾಗಿದ್ದು ತಕ್ಷಣವೇ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ  ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಾಜಿ ಶಾಸಕ , ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಟಾದ ಸಂಚಾಲಕ ಸಂಜೀವ ಮಠಂದೂರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisement
Advertisement

ಕರಾವಳಿ ಜಿಲ್ಲೆಯ ಆರ್ಥಿಕ ಜೀವನಾಡಿಯಾದ ಅಡಿಕೆ ಬೆಳೆಯ ಧಾರಣೆ ಇದೀಗ ಕುಸಿತವಾಗಿದೆ. 500 ಗಡಿ ದಾಟಿದ್ದ ಅಡಿಕೆ ಬೆಲೆ ಇದೀಗ 340 ಕ್ಕೆ ಕುಸಿದಿದೆ,ಅಡಿಕೆಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡ ಕೃಷಿಕನ ಮೇಲೆ ಇದು ದೊಡ್ಡ ಪರಿಣಾಮವನ್ನೇ ಬೀರಿದೆ ಎಂದರು. ಅಡಿಕೆ ಧಾರಣೆಯ ವ್ಯತ್ಯಾಸವು ಜಿಲ್ಲೆಯ ಆರ್ಥಿಕ ವಹಿವಾಟಿನ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಶಿರಸಿಯ ಟಿಎಸ್‌ಎಸ್‌ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಅವರು ಅಡಿಕೆ ದರ ಕುಸಿತಕ್ಕೆ ವಿದೇಶಿ ಅಡಿಕೆ ಆಮದು ಕಾರಣವಾಗಿದ್ದು, ಧಾರಣೆ ಕುಸಿತದ ಆತಂಕ ಬೇಡ ಎಂದು ಹೇಳಿದ್ದಾರೆ. ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿ ಮಾಡಲಾಗುವುದು. ಈ ಸ್ಥಿತಿಯಲ್ಲಿ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆಗಾರರು ಈಗ ಸಂಕಷ್ಟ ಪಡುವ ಸಮಯವಾಗುತ್ತಿದೆ ಕಳೆದ 15-20 ದಿನದಲ್ಲಿ ಅಡಿಕೆ ಧಾರಣೆ ಬರೋಬ್ಬರಿ 25-35 ರೂಪಾಯಿ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 80 – 90 ರೂಪಾಯಿಯಷ್ಟು ಕುಸಿತವಾಗಿದೆ. ಅಡಿಕೆ ಫಸಲೂ ಕಡಿಮೆಯಾಗುತ್ತಿದೆ, ಧಾರಣೆಯೂ ಇಳಿಕೆಯಾಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈಗ ಬರಗಾಲದ ಹೊಡೆತ  ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅಡಿಕೆ ವಿಸ್ತರಣೆಯ ಪ್ರದೇಶದಲ್ಲಿ ಕಂಡುಬಂದಿದೆ. ಅಡಿಕೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ.ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ. ಕರಾವಳಿ ಜಿಲ್ಲೆಯಲ್ಲಿ ಅಡಿಕೆ ಧಾರಣೆಗೆ ಹೊಡೆತ ಬಿದ್ದರೆ ಆರ್ಥಿಕವಾಗಿಯೂ ಜಿಲ್ಲೆಗೆ ಹೊಡೆತ ಬೀಳುತ್ತದೆ.

ಮೇಘಾಲಯದ ವಿಧಾನಸಭೆಯಲ್ಲೂ ಅಡಿಕೆ ಬೆಳೆಯ ಬಗ್ಗೆ ಚರ್ಚೆಯಾಗಿದೆ. ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ಅಡಿಕೆಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ತರಬಹುದೇ ಎಂಬ ಚರ್ಚೆಯಾಗಿದೆ.ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ರಿಂಬುಯಿ ಅವರು ಈ ಪ್ರಶ್ನೆ ಎತ್ತಿದ್ದಾರೆ. ಅಡಿಕೆ ಬೆಲೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಇಳಿಕೆಯಾಗಿರುವುದರಿಂದ ಮೇಘಾಲಯದ ರಾಜ್ಯದಾದ್ಯಂತ ಅಡಿಕೆ ರೈತರು ಕಂಗಾಲಾಗಿದ್ದಾರೆ ಎಂದು ರಿಂಬುಯಿ  ಹೇಳಿದರು.ಇದರಿಂದ ರೈತರ ಆದಾಯಕ್ಕೆ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿಸಿದರು.2019-20 ನೇ ಸಾಲಿನಲ್ಲಿ ಅಡಿಕೆ ಬೆಳೆಯುವ ಪ್ರದೇಶವು 18,231 ಹೆಕ್ಟೇರ್‌ನಿಂದ ಇತ್ತು, ಈಗ ಅದು 34,410 ಹೆಕ್ಟೇರ್‌ಗೆ ಏರಿಕೆಯಾಗಿದೆ  ಎಂದು  ಉಲ್ಲೇಖಿಸಿದ್ದಾರೆ.

Advertisement

ಕೃಷಿ ಮತ್ತು ರೈತರ ಕಲ್ಯಾಣ ಸಚಿವ, ಡಾ ಮಜೆಲ್ ಅಂಪಾರೀನ್ ಲಿಂಗ್ಡೋಹ್ ಮಾತನಾಡಿ  ರಾಜ್ಯದಲ್ಲಿ ಅಡಿಕೆ ಉತ್ಪಾದನೆಯೆ ಹೆಚ್ಚಾಗಿರುವುದು ನಿಜ,  ಕೃಷಿಕರಿಗೆ ಅಗತ್ಯವಾದ ಎಲ್ಲಾ ನೆರವು ನೀಡಲಾಗುತ್ತಿದೆ. ಎಂಎಸ್‌ಪಿಗೆ ಸಂಬಂಧಿಸಿದಂತೆ ಸರ್ಕಾರವು  ಪರಿಶೀಲಿಸುತ್ತದೆ ಎಂದು  ಭರವಸೆ ನೀಡಿದರು.

ಚರ್ಚೆಯ ಬಳಿಕ ಮಾತನಾಡಿದ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಅಡಿಕೆಯನ್ನು ಸಂಸ್ಕರಿಸಿ ಮಾರಾಟ ಮಾಡಿದರೆ ಹೆಚ್ಚು ದರ ಸಿಗುತ್ತದೆ. ಸಂಸ್ಕರಿಸಿದ ಅಡಿಕೆಯ ಮೌಲ್ಯವು ಹತ್ತು ಪಟ್ಟು ಬೆಲೆಗೆ ಮಾರಾಟವಾಗುತ್ತದೆ .ಇಂದು ಸಂಸ್ಕರಿಸಿದ ಅಡಿಕೆ ಪ್ರತಿ ಕೆಜಿಗೆ 400-500 ರೂ.ಗಳಿಗೆ ಮಾರಾಟವಾಗುತ್ತಿದೆ, ಆದ್ದರಿಂದ ನಾವು ಅಡಿಕೆಯನ್ನು ಸಂಸ್ಕರಿಸುವ ಮುಂದಿನ ಮಾರ್ಗವನ್ನು ತಿಳಿದುಕೊಂಡು  ಮೌಲ್ಯವರ್ಧನೆ ಕಡೆಗೂ ಗಮನಹರಿಸಬೇಕು ಎಂದು ಸಂಗ್ಮಾ ಹೇಳಿದರು.

collapsed Arecanut market. There is  demand for announcement of Minimum support price.Arecanut market is also an important crop of economic transactions in the coastal district. Therefore, former MLA Sanjeeva Matandoor has urged the Karnataka government to immediately focus on Arecanut market support price.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

11 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

12 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

12 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

13 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

13 hours ago