ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ನೇಮಕ ಈಚೆಗೆ ನಡೆಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ವಹಿಸಿ, ಶಿಕ್ಷಕ ರಕ್ಷಕ ಸಂಘದ ಪಾತ್ರದ ಮಹತ್ವವನ್ನು ಉಲ್ಲೇಖಿಸುವುದರೊಂದಿಗೆ ಕಾಲೇಜಿನ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.ಶೈಕ್ಷಣಿಕ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎಲ್ಲರೂ ಒಗ್ಗೂಡಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ನೂತನ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದಯ ಅವರು ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಪ್ರೇಮ, ಸಹ ಕಾರ್ಯದರ್ಶಿಯಾಗಿ ಸೇಸಮ್ಮ ಇವರು ಆಯ್ಕೆಗೊಂಡರು. ಸದಸ್ಯರುಗಳಾದ ಶಿವಣ್ಣ, ಪಾರ್ವತಿ ಹಾಗೂ ನಾಗೇಶ ಇವರುಗಳು ಪ್ರಸ್ತುತ ಶೈಕ್ಷಣಿಕ ವರ್ಷಕ್ಕೂ ಮುಂದುವರಿದರು. ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆಯಿತು. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಡಾ. ನೂರಂದಪ್ಪ ನಡೆಸಿಕೊಟ್ಟರು.
ಕಾರ್ಯಕ್ರಮವು ದಿವ್ಯಶ್ರೀ ಜಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶಿಕ್ಷಕರ ಕಾರ್ಯಕಾರಿ ಸಮಿತಿ, ಉಪಾಧ್ಯಕ್ಷ ಡಾ. ಸೀತಾರಾಮ ಪಿ. ಸ್ವಾಗತಿಸಿದರು. ಶಿಕ್ಷಕ- ರಕ್ಷಕ ಸಂಘದ ಖಜಾಂಜಿ ವೆರೋನಿಕಾ ಪ್ರಭಾ ವಿ. ಪಿ., 2023-2024ರ ಸಾಲಿನ ಲೆಕ್ಕ ಪತ್ರ ಮಂಡನೆ ಮಾಡಿದರು. ಶಿಕ್ಷಕ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಚಂದ್ರಕಲಾ ವಂದಿಸಿದರು.ಕಾರ್ಯಕ್ರಮವನ್ನು ಪಾವನ ರೈ ನಿರೂಪಿಸಿದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…