ಪ್ರಮುಖ

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ ಅವರವರ ಮುಂದಿನ ಗುರಿಗೆ ತಕ್ಕಂತೆ ಪರೀಕ್ಷೆಗಳನ್ನು(Exam) ಬರೆದು ತಮ್ಮ ಮುಂದಿನ ವಿದ್ಯಾಭ್ಯಾಸದ(Education) ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರ ಭಾಗವಾಗಿ ಇಂದು (ಮೇ 12) ದೇಶಾದ್ಯಂತ ಕಾಮೆಡ್-ಕೆ  (COMEDK) ಪರೀಕ್ಷೆ ನಡೆಯಲಿದೆ. ಬೆಂಗಳೂರು (Bengaluru) ಸೇರಿ ದೇಶದ 182 ನಗರಗಳ 264 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ.

Advertisement
Advertisement
ಒಂದೇ ದಿನ 3 ಅವಧಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 1.18 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಬೆಳಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ 4 ಗಂಟೆ ಹಾಗೂ ಸಂಜೆ 5.30ರಿಂದ 8.30ರ ವರೆಗೆ ಮೂರು ಸೆಷನ್‌ಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಕಾಮೆಡ್-ಕೆ ಪ್ರಕಟಣೆಯಲ್ಲಿ ತಿಳಿಸಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಡೀಮ್ಡ್ ವಿವಿಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಾತಿಗೆ ಕಾಮೆಡ್-ಕೆ ಪರೀಕ್ಷೆ ನಡೆಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

5 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

6 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

8 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

9 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

9 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago