ಬೆಲೆ ಏರಿಕೆ ಬೆಲೆ ಬರೆ ಮತ್ತೆ ಮತ್ತೆ ಗಾಯದ ಮೇಲೆ ಬೀಳುತ್ತಲೇ ಇದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಸುವ ಮೂಲಕ ಹೊಟೆಲ್ ತಿಂಡಿಗಳ ಬೆಲೆ ಏರಿಕೆ #Pricehikeಯ ಬಿಸಿ ಮುಂದೆ ತಾಗುವುದರಲ್ಲಿ ಸಂಶಯವಿಲ್ಲ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ವಾಣಿಜ್ಯ ಬಳಕೆ ಸಿಲಿಂಡರ್ #CommercialCylinder ಬೆಲೆ ಏರಿಕೆಯಾಗಿದೆ.
Advertisement
19 ಕೆಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್, ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.
ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ವಾಣಿಜ್ಯ LPG ಗೆ ಮೊದಲ ಬೆಲೆ ಏರಿಕೆಯಾಗಿದೆ. ಮೇ ತಿಂಗಳಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆ ಮಾಡಿತ್ತು. ಹೀಗಾಗಿ ಪ್ರತಿ ಸಿಲಿಂಡರ್ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement