ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಜಂಟಿ ಸಮೀಕ್ಷೆಯಲ್ಲಿ ದಾಖಲಾಗದೇ ಇರುವಂತಹ ರೈತರನ್ನು ಗುರುತಿಸಿ, ಅವರಿಗೂ ಸಹ ಪರಿಹಾರ ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯ ಜಗದೀಶ ಶೆಟ್ಟರ್ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಜಿ+೩ ಮಾದರಿ ಮನೆಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು. ಸರ್ಕಾರದಿಂದ ಜಾರಿಯಲ್ಲಿರುವ ವಿವಿಧ ವಸತಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದಂತಹ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು. ಬೆಳಗಾವಿಯ ತರಕಾರಿ ಹಾಗೂ ಹಣ್ಣುಗಳ ಮಾರುಕಟ್ಟೆಯನ್ನು ವಿಸ್ತರಿಸಲು ಗಮನ ಹರಿಸಬೇಕು. ಜೊತೆಗೆ ಶೀಥಿಲ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಬೇಕು ಎಂದು ಜಗದೀಶ ಶೆಟ್ಟರ್ ನಿರ್ದೇಶಿಸಿದರು. (Source: D D)