ಬಸ್ ನಿಲ್ದಾಣ(Bus Stand), ವ್ಯಾಪಾರ ಮಳಿಗೆ(Commercial complex) ಮತ್ತು ಆಹಾರ ಉದ್ದಿಮೆಗಳಲ್ಲಿ(Food industry) ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ (Expired Ingredients Sales) ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 (Food Security Act 2006) ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…
ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…