ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ | ಧರ್ಮದ ಮರ್ಮವನ್ನರಿತು ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ- ಡಿ. ವೀರೇಂದ್ರ ಹೆಗ್ಗಡೆ

September 18, 2023
7:01 PM
ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭ ನಡೆಯಿತು.

ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

Advertisement
Advertisement

ಅವರು  ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.

Advertisement

ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.

ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.

Advertisement

ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ವಂದಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror