Advertisement
ಸುದ್ದಿಗಳು

#BharatJodoYatra | ಕರ್ನಾಟಕ ಪ್ರವೇಶಿಸಿದ ಭಾರತ್‌ ಜೋಡೋ ಯಾತ್ರೆ | ಮೊದಲ ದಿನವೇ ಬಿಜೆಪಿ ವಿರುದ್ಧ ಗುಡುಗಿದ ಸಿದ್ಧರಾಮಯ್ಯ |

Share

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶ ಮಾಡಿದೆ. 21 ದಿನಗಳ ಕಾಲ ಈ ಯಾತ್ರೆ ರಾಜ್ಯದಾದ್ಯಂತ 511 ಕಿಲೋ ಮೀಟರ್‌ ಸಂಚರಿಸಲಿರುವ ಈ ಯಾತ್ರೆಗೆ ಅದ್ದೂರಿ ಸ್ವಾಗತ ದೊರೆತಿದೆ.

ಮೊದಲ ದಿನ ಬೆಂಗಳೂರು ದಕ್ಷಿಣ, ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು, ಚಾಮರಾಜನಗರ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು, ನಾಯಕರು, ಕಾರ್ಯಕರ್ತರು  ಭಾಗಿಯಾಗಿದ್ದಾರೆ. 21 ದಿನಗಳ ಯಾತ್ರೆಯ ಬಳಿಕ ರಾಯಚೂರು ಮೂಲಕ ಭಾರತ್ ಜೋಡೋ ಯಾತ್ರೆ ಮುಂದಿನ ರಾಜ್ಯಕ್ಕೆ ತೆರಳಲಿದೆ.

ಸುಳ್ಯ-ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು

ಶುಕ್ರವಾರ ರಾಜ್ಯ ಪ್ರವೇಶಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು.ಗುಂಡ್ಲುಪೇಟೆಯಲ್ಲಿ ನಡೆದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ ಎಂದು  ಹೇಳಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕದಲ್ಲಿ ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಜನರು ಈಗ ಆತಂಕದ ಪರಿಸ್ಥಿತಿಯಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿಯವರಿಗೆ ದೇಶದಲ್ಲಿ ಶಾಂತಿ, ಸಾಮರಸ್ಯ ಇರಬಾರದು. ಜನರನ್ನು ಇಬ್ಭಾಗ ಮಾಡುವುದೇ ಇವರ ಉದ್ದೇಶ. ಸಂವಿಧಾನ ಉಳಿಸುವ ಕೆಲಸಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಹೇಳಿದರು.

ಭಾರತ್‌ ಜೋಡೋ ಯಾತ್ರೆಯ ಆರಂಭದಲ್ಲಿಯೇ ಅರಣ್ಯ ನಿಯಮಗಳನ್ನು ಉಲ್ಲಂಘಿಸಿದ ಬಗ್ಗೆ ಚರ್ಚೆಯಾಗಿದೆ. ಕರ್ನಾಟಕದ ಗಡಿ ಕೆಕ್ಕನಹಳ್ಳಿ ಬಳಿಯ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ಜಮಾಯಿಸಿದ್ದರು. ಮೀಸಲು ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದು, ಕಾರಿನಲ್ಲಿ ಮಾತ್ರ ಸಂಚರಿಸಲು ಅನುಮತಿ ನೀಡಿತ್ತು. ಆದರೆ ಸಿದ್ದರಾಮಯ್ಯ ತಮ್ಮ ವಾಹನ ನಿಲ್ಲಿಸಿ ಹುಲಿ ಸಂರಕ್ಷಿತ ಅರಣ್ಯದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ್ದು, ಮಾಜಿ ಸಚಿವರು ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಮಹದೇವಪ್ಪ, ಕೆ.ಜೆ. ಜಾರ್ಜ್ ಮತ್ತು ಇತರರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 hour ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

8 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

9 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

15 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

15 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

23 hours ago