ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಜಿಲ್ಲೆಗೆ ಇನ್ನೊಬ್ಬ ಪದವೀಧರ ಅಭ್ಯರ್ಥಿ | ಕಾಂಗ್ರೆಸ್‌ ನಿಂದ ಪದ್ಮರಾಜ್ ಆರ್ |

March 22, 2024
10:32 PM
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಭ್ಯರ್ಥಿಯ ಪರಿಚಯ ಹೀಗಿದೆ..

ಲೋಕಸಭಾ ಚುನಾವಣೆಯ ಕಾವು ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ತಮ್ಮ ಅಭ್ಯರ್ಥಿಯನ್ನು ಘೋಷಿಸಿದೆ. ಬಿಜೆಪಿಯಿಂದ ಕ್ಯಾ.ಬ್ರಿಜೇಶ್‌ ಚೌಟ ಕಣಕ್ಕೆ ಇಳಿದರೆ ಕಾಂಗ್ರೆಸ್‌ನಿಂದ ಪದ್ಮರಾಜ್‌ ಆರ್‌ ಕಣಕ್ಕೆ ಇಳಿದಿದ್ದಾರೆ. ಈ ಬಾರಿ ಎರಡೂ ಪಕ್ಷದಿಂದ ಪದವೀಧರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಬ್ಬರೂ ಸಮರ್ಥರು ಇದ್ದಾರೆ. ಆಯ್ಕೆ ಮತದಾರರದ್ದು. ಈ ಹಿಂದೆ ಬಿಜೆಪಿ ಅಭ್ಯರ್ಥಿ ಪ್ರೊಪೈಲ್‌ ನೀಡಲಾಗಿತ್ತು. ಕಾಂಗ್ರೆಸ್‌ ಅಭ್ಯರ್ಥಿಯ ಪ್ರೊಪೈಲ್‌ ಹೀಗಿದೆ…

Advertisement
Advertisement

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ. ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರನಾಗಿ ಜನಿಸಿದ ಪದ್ಮರಾಜ್ ಅವರ ಅಣ್ಣ ಡಾ. ಪುರುಷೋತ್ತಮ ಆರ್. ಅವರು ಹೃದ್ರೋಗ ತಜ್ಞರು.

ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ ಪದವಿಯನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು. 1995 ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರೊಂದಿಗೆ ಪ್ರಾರಂಭಿಸುವ ಅವಕಾಶ ದೊರೆತಿತ್ತು. ನಾಲ್ಕು ವರ್ಷಗಳ ಬಳಿಕ ಬಳ್ಳಾಲ್‌ಬಾಗ್‌ನಲ್ಲಿ ಸ್ವಂತ ಕಚೇರಿ ಪ್ರಾರಂಭಿಸಿದರು. ವೃತ್ತಿ ಜೀವನದ ಆರಂಭದ ಸಮಯದಲ್ಲಿ ಹಿರಿಯ ವಕೀಲರಾದ ಪಿ.ಗಂಗಾಧರ್ ಸಲಹೆಯಂತೆ ಆಗಿನ ಬಿಲ್ಲವರ ಯೂನಿಯನ್‌ನ ಸದಸ್ಯನಾದರು. ತಾನು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಶುದ್ಧಹಸ್ತದ, ನೇರ ನಡೆನುಡಿಯ, ಬಿಲ್ಲವ ಸಮಾಜದ  ನಾಯಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಎಲ್ಲಾ ಚುನಾವಣೆ ಸಂದರ್ಭದಲ್ಲೂ ಅವರಿಗಾಗಿ ದುಡಿದಿದ್ದಾರೆ.

25 ವರ್ಷದಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾಗಿದ್ದಾರೆ. ಕೋವಿಡ್ ಲಾಕ್‌ಡೌನ್ ಸಂದರ್ಭ ಬಿ.ಜನಾರ್ದನ ಪೂಜಾರಿಯವರ ಆದೇಶದಂತೆ ದಿನಂಪ್ರತಿ ದೇವಸ್ಥಾನ ವತಿಯಿಂದ ಸುಮಾರು ಒಂದು ಸಾವಿರ ಬಡವರು, ನಿರಾಶ್ರಿತರಿಗೆ ಹಾಗೂ ವಲಸೆ ಕೂಲಿ ಕಾರ್ಮಿಕರಿಗೆ ಅನ್ನದಾನ ನಡೆಯುತ್ತಿತ್ತು. ಈ ಸಂದರ್ಭ ಪದ್ಮರಾಜ್ ಅವರೇ ಖುದ್ದಾಗಿ ಸೇವಾದಳದವರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿ ಅನ್ನದಾನ ವಿತರಣೆಯಲ್ಲಿ ಭಾಗಿಯಾಗುತ್ತಿದ್ದರು.

ಪದ್ಮರಾಜ್ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ದೇವಸ್ಥಾನದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 409 ಕ್ವಿಂಟಾಲ್ ಅಕ್ಕಿದಾನ ಮಾಡಲಾಗಿತ್ತು. ಎರಡನೇ ಲಾಕ್‌ಡೌನ್ ಸಂದರ್ಭದಲ್ಲೂ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಸಹಸ್ರಾರು ನೊಂದವರಿಗೆ ದಿನಸಿ, ಆಹಾರ ಸಾಮಗ್ರಿ ತಲುಪಿಸುವ ಕೆಲಸ ಮಾಡಿದ್ದರು.

Advertisement

ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರ, ಜೆ.ಪಿ.ಪ್ರತಿಷ್ಠಾನ ದ.ಕ. ಜಿಲ್ಲಾ ಗೌರವ ಸಂಚಾಲಕರಾಗಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ
May 16, 2025
7:23 AM
by: The Rural Mirror ಸುದ್ದಿಜಾಲ
ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |
May 16, 2025
7:16 AM
by: The Rural Mirror ಸುದ್ದಿಜಾಲ
ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು
May 16, 2025
7:12 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?
May 15, 2025
10:06 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group