ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವೆ | ಗ್ರಾಮೀಣಾಭಿವೃದ್ಧಿಗೆ ಆದ್ಯತೆ ಇದೆ – ಪದ್ಮರಾಜ್‌ ಆರ್

April 12, 2024
11:07 AM
ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವೆ, ಕೃಷಿ ಮಾರುಕಟ್ಟೆಗೆ ಕಾಯಕಲ್ಪ ಸೇರಿದಂತೆ . ಗ್ರಾಮೀಣಾಭಿವೃದ್ಧಿಗೂ ಆದ್ಯತೆ ನೀಡಲಾಗುವುದು ಎಂದು ಪದ್ಮರಾಜ್‌ ಆರ್‌ ಹೇಳಿದರು.

ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಹಳದಿ ಎಲೆರೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌ ಹೇಳಿದ್ದಾರೆ.

Advertisement

ದ ರೂರಲ್‌ ಮಿರರ್.ಕಾಂ ನಡೆಸಿದ ಪುಟ್ಟ ಸಂದರ್ಶನದಲ್ಲಿ ಮಾತನಾಡಿದ ಪದ್ಮರಾಜ್‌, ಅಡಿಕೆ ಬೆಳೆಗಾರರು ಹಾಗೂ ಕೃಷಿಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಸುಳ್ಯದಲ್ಲಿ ಅಡಿಕೆ ಹಳದಿ ಎಲೆರೋಗ ಇದೆ, ಎಲ್ಲಾ ಕಡೆ ಎಲೆಚುಕ್ಕಿ ರೋಗ ಇದೆ, ಮಾರುಕಟ್ಟೆ ಸಮಸ್ಯೆ  ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗಮನಿಸಿದ್ದೇನೆ. ಈ ಸಮಸ್ಯೆಗಳಿಗೆ ಸರ್ಕಾರವು ಈ ಮೊದಲೇ ಸ್ಪಂದಿಸಬೇಕಿತ್ತು. ಸರ್ಕಾರದ ಮೂಲಕ ತಜ್ಞರ ಸಮಿತಿಗಳನ್ನು ರಚಿಸಿಕೊಂಡು, ಪ್ರಯೋಗಾಲಯಕ್ಕೆ ಬೇಕಾದ ಅಗತ್ಯವಾದ ನೆರವುಗಳನ್ನು ನೀಡುವುದು ಹಾಗೂ ಕೃಷಿಕರಿಗೆ ತಕ್ಷಣಕ್ಕೆ ಬೇಕಾದ ಅಗತ್ಯತೆಗಳನ್ನು ಪೂರೈಸಲು ಪ್ರಯತ್ನ ಪಡುತ್ತೇನೆ ಎಂದು ಪದ್ಮರಾಜ್‌ ಹೇಳಿದರು. ಇದರ ಜೊತೆಗೆ ಮಾರುಕಟ್ಟೆ ಕಡೆಗೂ ಗಮನ ಹರಿಸಲಾಗುವುದು ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಕೂಡಾ ಅಗತ್ಯವಾಗಿದೆ. ಗ್ರಾಮೀಣ ಭಾಗದ ಹಲವು ಮೂಲಭೂತ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕಿದೆ. ಇದಕ್ಕಾಗಿ ಆದ್ಯತೆಯಲ್ಲಿ ಪ್ರಯತ್ನಪಡಲಾಗುವುದು ಎಂದು ಪದ್ಮರಾಜ್‌ ಹೇಳಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group