ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಹಳದಿ ಎಲೆರೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಹೇಳಿದ್ದಾರೆ.
ದ ರೂರಲ್ ಮಿರರ್.ಕಾಂ ನಡೆಸಿದ ಪುಟ್ಟ ಸಂದರ್ಶನದಲ್ಲಿ ಮಾತನಾಡಿದ ಪದ್ಮರಾಜ್, ಅಡಿಕೆ ಬೆಳೆಗಾರರು ಹಾಗೂ ಕೃಷಿಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಸುಳ್ಯದಲ್ಲಿ ಅಡಿಕೆ ಹಳದಿ ಎಲೆರೋಗ ಇದೆ, ಎಲ್ಲಾ ಕಡೆ ಎಲೆಚುಕ್ಕಿ ರೋಗ ಇದೆ, ಮಾರುಕಟ್ಟೆ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗಮನಿಸಿದ್ದೇನೆ. ಈ ಸಮಸ್ಯೆಗಳಿಗೆ ಸರ್ಕಾರವು ಈ ಮೊದಲೇ ಸ್ಪಂದಿಸಬೇಕಿತ್ತು. ಸರ್ಕಾರದ ಮೂಲಕ ತಜ್ಞರ ಸಮಿತಿಗಳನ್ನು ರಚಿಸಿಕೊಂಡು, ಪ್ರಯೋಗಾಲಯಕ್ಕೆ ಬೇಕಾದ ಅಗತ್ಯವಾದ ನೆರವುಗಳನ್ನು ನೀಡುವುದು ಹಾಗೂ ಕೃಷಿಕರಿಗೆ ತಕ್ಷಣಕ್ಕೆ ಬೇಕಾದ ಅಗತ್ಯತೆಗಳನ್ನು ಪೂರೈಸಲು ಪ್ರಯತ್ನ ಪಡುತ್ತೇನೆ ಎಂದು ಪದ್ಮರಾಜ್ ಹೇಳಿದರು. ಇದರ ಜೊತೆಗೆ ಮಾರುಕಟ್ಟೆ ಕಡೆಗೂ ಗಮನ ಹರಿಸಲಾಗುವುದು ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಕೂಡಾ ಅಗತ್ಯವಾಗಿದೆ. ಗ್ರಾಮೀಣ ಭಾಗದ ಹಲವು ಮೂಲಭೂತ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕಿದೆ. ಇದಕ್ಕಾಗಿ ಆದ್ಯತೆಯಲ್ಲಿ ಪ್ರಯತ್ನಪಡಲಾಗುವುದು ಎಂದು ಪದ್ಮರಾಜ್ ಹೇಳಿದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…