ಸುಳ್ಯ| ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ನಂದಕುಮಾರ್ ಬೆಂಬಲಿಗರಿಂದ ಸಮಾವೇಶ| ಪಕ್ಷೇತರ ಸ್ಫರ್ಧೆಯ ಎಚ್ಚರಿಕೆ

April 9, 2023
8:05 PM

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು , ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೊರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.

ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು. ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್‌ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ.‌ ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror