ಯುವ ಸಮುದಾಯದ ಮನಗೆಲ್ಲಲು ಗ್ಯಾರಂಟಿ ಜಾರಿಗೆ ನಿರ್ಧರಿಸಿದ ಕಾಂಗ್ರೆಸ್ | ಇಂದಿನಿಂದ ಯುವ ನಿಧಿ ನೋಂದಣಿ ಆರಂಭ

December 26, 2023
1:25 PM

ಗ್ಯಾರಂಟಿ ಮೇಲೆ ಗ್ಯಾರಂಟಿ(Guarantee) ಭರವಸೆಗಳನ್ನು ನೀಡಿ ವಿಧಾನ ಸಭೆ ಚುನಾವಣೆ(Election) ಗೆದ್ದ ಕಾಂಗ್ರೆಸ್‌ ಸರ್ಕಾರ ಸದ್ಯ ಕೊಟ್ಟಿರುವ ಐದರಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಈಗ ಉಳಿದಿರುವ ಯುವ ನಿಧಿ ಯೋಜನೆಯನ್ನು(Yuva Nidhi Scheme) ಜಾರಿಗೆ ತರಲು ಮುಂದಾಗಿದೆ. ಲೋಕಸಭಾ ಚುನಾವಣೆ (Lok Sabha) ಹೊಸ್ತಿನಲ್ಲಿ ಕಾಂಗ್ರೆಸ್ ಐದನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಇಂದಿನಿಂದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. 

Advertisement

ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ಅದನ್ನ ಮತ್ತೊಮ್ಮೆ ಸಾಭೀತು ಮಾಡಿದೆ. ಕೊಟ್ಟ ಮಾತಿನಂತೆ ತನ್ನ ಕೊನೆಯ ಗ್ಯಾರಂಟಿ ಯೋಜನೆ ಯುವ ನಿಧಿಯನ್ನ  ತಿಂಗಳಾಂತ್ಯಕ್ಕೆ ಜಾರಿ ಮಾಡಲು ಮುಂದಾಗಿದೆ. ಡಿಸೆಂಬರ್ ತಿಂಗಳ 26ರಂದು ಯುವ ನಿಧಿ ಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಲುವಾಗಿನ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇನ್ನು ರಾಷ್ಟ್ರ ಕವಿ, ಯುವ ಸಮುದಾಯದ ಸ್ಪೂರ್ತಿ ಕುವೆಂಪುರವರ ಪುಣ್ಯಭೂಮಿ ಶಿವಮೊಗ್ಗದಲ್ಲಿ 2024ರ ಜನವರಿ 12ರಂದು ಈ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಅಂದೇ ಯೂತ್ ಐಕಾನ್ ವಿವೇಕಾನಂದರ ಜನ್ಮ ಜಯಂತಿ ಅನ್ನೋದು ಮತ್ತೊಂದು ಗಮನಾರ್ಹ ವಿಚಾರ. ಪ್ರಸಕ್ತ ಸಾಲಿನಲ್ಲಿ ಯೋಜನಾ ಗಾತ್ರ 250 ಕೋಟಿಯಾಗಿದ್ದು ಮುಂದಿನ ವರ್ಷ ಇದರ ಪ್ರಮಾಣ 1,250 ಕೋಟಿಗಳಾಗಲಿದೆ. ರಾಜ್ಯದ ವಿಧ್ಯಾರ್ಥಿಗಳಿಗೆ ಮಾತ್ರ ಯೋಜನೆ ಲಾಭ ದೊರೆಯಲಿದೆ. ಇನ್ನು ಯೋಜನೆ ದುರ್ಬಳಕೆ ತಡೆಗೂ ಸರ್ಕಾರ ಕ್ರಮ ಕೈಗೊಂಡಿದೆ.

ಯುವಕರಿಗೆ ಕೆಲಸ ಸಿಗುವವರೆಗೆ ಯೋಜನೆ ಹಣ ಲಭ್ಯವಾಗತ್ತೆ ಇದಕ್ಕಾಗಿ ಅವರು ಪ್ರತಿ ತಿಂಗಳ 25ನೇ ತಾರೀಖಿನೊಳಗೆ ತಮ್ಮ ಅರ್ಜಿಯಲ್ಲಿ ನಿಖರ ಮಾಹಿತಿ ನಮೂದು ಮಾಡಬೇಕು. ಜೊತೆಗೆ ಯೋಜನೆ ಹಣ ಪಡೆಯುವವರ ಬಗ್ಗೆ ಸಮಗ್ರ ಮಾಹಿತಿಯನ್ನು ಸರ್ಕಾರ ಕಲೆ ಹಾಕಲಿದೆ. ಒಂದು ವೇಳೆ ಕೆಲಸ ಸಿಕ್ಕ ಬಳಿಕವೂ ಹಣ ಪಡೆಯುವುದು ಕಂಡುಬಂದರೆ ಅವರಿಂದ ಹಣ ವಾಪಾಸ್ ಪಡೆದುಕೊಳ್ಳಲು ಸರ್ಕಾರ ಪ್ಲಾನ್ ಮಾಡಿದೆ. ಯುವನಿಧಿ ಅರ್ಜಿ ಸಲ್ಲಿಕೆಯನ್ನ ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಸೇವಾಸಿಂಧು ಪೋರ್ಟ್ ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಯುವನಿಧಿ ಯೋಜನೆ ಸದುಪಯೋಗ ಪಡೆದುಕೊಳ್ಳಲು ಬೇಕಾದ ಅರ್ಹತೆಗಳೇನು?

  • 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು
  • ಉನ್ನತ ಶಿಕ್ಷಣ ವ್ಯಾಸಾಂಗ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಬಹುದು
  • ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ
  • ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೋಮಾ ಹೊಂದಿರುವವರಿಗೆ 1,500 ರೂ. ಆರ್ಥಿಕ ನೆರವು
  • ಉದ್ಯೋಗ ಸಿಗುವವರೆಗೆ ಅಥವಾ 2 ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತೆ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

  • ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು.
  • ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ ಇರಬೇಕು
  • ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ), ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.
  • ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ.
  • ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ಸ್ಥಗಿತಗೊಳ್ಳಲಿದೆ.

ಯೋಜನೆಗೆ ಅರ್ಹರಾಗದೇ ಇರುವವರು

  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ
  • Apprentice ವೇತನವನ್ನು ಪಡೆಯುತ್ತಿರುವವರು
  • ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು
  • ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರಿಗೆ ಯೋಜನೆಯ ಫಲ ಸಿಗುವುದಿಲ್ಲ.

In the run-up to the Lok Sabha elections, the Congress has decided to implement the Fifth Guarantee Scheme. The registration process of Yuva Nidhi Scheme will start from today. CM Siddaramaiah and DCM DK Shivakumar will inaugurate the program at the banquet hall of Vidhana Soudha at 11 am today.

– ಅಂತರ್ಜಾಲ ಮಾಹಿತಿ

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group