ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಘೋಷಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ವರುಣಾ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಕ್ಷೇತ್ರ ಆಯ್ಕೆಯ ಗೊಂದಲಕ್ಕೆ ತೆರೆ ಬಿದ್ದಿದೆ.
ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಂಗಳೂರಿನಿಂದ ಯು.ಟಿ. ಖಾದರ್, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಸುವರ್ಣ, ಸುಳ್ಯ ಮೀಸಲು ಕ್ಷೇತ್ರದಿಂದ ಕೃಷ್ಣಪ್ಪ ಜಿ, ಕಾರವಾರ ಅಂಕೋಲಾ ಕ್ಷೇತ್ರದಿಂದ ಸತೀಶ್ ಸೈಲ್, ಭಟ್ಕಳದಿಂದ ಮಂಕಾಳ ವೈದ್ಯ, ಹಳಿಯಾಳದಿಂದ ದೇಶಪಾಂಡೆ ಸ್ಪರ್ಧೆ ಮಾಡಲಿದ್ದಾರೆ, ಇನ್ನೂ ಉಡುಪಿ ಜಿಲ್ಲೆಯ ಬೈಂದೂರಿನಿಂದ ಗೋಪಾಲ ಪೂಜಾರಿ, ಕುಂದಾಪುರದಿಂದ ದಿನೇಶ್ ಹೆಗ್ಡೆ, ಕಾಪುದಿಂದ ಸೊರಕೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.ಇನ್ನೂ ನಂಜನಗೂಡು ಕ್ಷೇತ್ರದಿಂದ ದ್ರವನಾರಾಯಣ ಪುತ್ರ ದರ್ಶನ್ ದ್ರವನಾರಾಯಣ ಹಾಗೂ ರಾಜಾಜಿನಗರ ಕ್ಷೇತ್ರದಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂ ಎಲ್ ಸಿ ಪುಟ್ಟಣ್ಣಗೆ ಟಿಕೆಟ್ ಘೋಷಿಸಲಾಗಿದೆ.
ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟದ ಲಕ್ಷಣ ಕಂಡು ಬಂದಿದೆ. ಇದೀಗ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ತೀವ್ರ ಆಕಾಂಕ್ಷಿಯಾಗಿದ್ದ ನಂದಕುಮಾರ್ ರವರಿಗೆ ಇದೀಗ ಟಿಕೆಟ್ ಕೈ ತಪ್ಪಿದ್ದು, ಅವರ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ನಾಳೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಜನರು ನೊಂದಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ನಿಶ್ಚಿತ. ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಹೈಕಮಾಂಡ್ ಈ ಅವಕಾಶ ನೀಡಿದೆ. ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಆಕಾಂಕ್ಷಿಗಳಿಗೆ ಬೇಸರವಾಗುವುದು ಸಹಜ. ಇದನ್ನು ಸಮಾಧಾನಪಡಿಸಿ ಬಗೆಹರಿಸಲು ನಾಯಕರಿದ್ದಾರೆ. ಎಲ್ಲರೂ ಮಾತನಾಡಿ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುತ್ತೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕಾಂಗ್ರೆಸ್ ಪಟ್ಟಿ ರಿಲೀಸ್| ವರುಣಾದಿಂದ ಸಿದ್ದರಾಮಯ್ಯ, ಮಂಗಳೂರು ಉತ್ತರ, ದಕ್ಷಿಣ ಇನ್ನೂ ಸಸ್ಪೆನ್ಸ್ | ಸುಳ್ಯದಲ್ಲಿ ಅಸಮಾಧಾನದ ಅಲೆ | ಮಾತುಕತೆಯ ಮೂಲಕ ಬಗೆಹರಿಸುತ್ತೇವೆ ಎಂದ ಜಿ ಕೃಷ್ಣಪ್ಪ"