ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಣಾಳಿಕೆ : ಪ್ರಸ್ತಾಪ ವಾಪಸ್ ಸಾಧ್ಯತೆ

May 2, 2023
7:59 PM

 

Advertisement
ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಜರಂಗದಳ ನಿಷೇಧ ಪ್ರಸ್ತಾವವನ್ನು ವಾಪಸ್ ಪಡೆಯಲು ಚಿಂತನೆ ನಡೆಸಿದ್ದಾರೆ. ಇಂದು ರಾತ್ರಿ ನಾಯಕರು ಸಮಾಲೋಚನೆ ನಡೆಸಿ, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಜರಂಗದಳ ನಿಷೇಧ ಪ್ರಸ್ತಾವ ವಿವಾದಕ್ಕೀಡಾಗುತ್ತಿದ್ದಂತೆಯೇ ಇದರಿಂದ ಚುನಾವಣೆ ಮೇಲೆ ನಕಾರಾತ್ಮಕ ಪರಿಣಾಮವಾಗಬಹುದು ಎಂಬ ಚಿಂತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿದೆ ಎನ್ನಲಾಗಿದೆ. ಹೀಗಾಗಿ ಅದನ್ನು ಪ್ರಣಾಳಿಕೆಯಿಂದ ತೆಗೆದುಹಾಕಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಏನಿದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ?

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಪಿಎಫ್​ಐಯಂಥ ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಬಜರಂಗ ದಳದ ಹೆಸರು ಪ್ರಸ್ತಾಪಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ಈಗಾಗಲೇ ನಿಷೇಧಿಸಿದ್ದೇವೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ ಎಂದು ಹೇಳಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |
April 6, 2025
6:08 PM
by: ಸಾಯಿಶೇಖರ್ ಕರಿಕಳ
ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group