ಸುದ್ದಿಗಳು

ಗೃಹಲಕ್ಷ್ಮಿ ಹೆಸರಿನಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ 2 ಸಾವಿರ ರೂ. ಆರ್ಥಿಕ ನೆರವು | ಕಾಂಗ್ರೆಸ್‌ ಘೋಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹೆಸರಿನಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಯ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಆರ್ಥಿಕ ನೆರವು ನೀಡುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದಾರೆ.
ಸೋಮವಾರ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು. ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 2,000ರಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಣಿಯರಿಗೆ ನೆರವಾಗಲಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

3 hours ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

8 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

11 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

18 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

18 hours ago