ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರದಂದು ಯಾತ್ರೆಯನ್ನು ಬಿಟ್ಟು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.ಈ ಬಗ್ಗೆ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದೆ.
‘ಭಾರತ್ ಜೋಡೋ ಯಾತ್ರೆ’ಯ ಪ್ರಮುಖ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಕೂಡಾ ಒಬ್ಬರು. ಇದೀಗ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ರಾಜ್ಯದ ಮೂಲಕ ಹಾದುಹೋಗುತ್ತಿರುವ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಇರಬೇಕಾಗಿತ್ತು,ಈ ಬಗ್ಗೆ ಮನವಿ ಮಾಡಿ ಸಮಯಾವಕಾಶ ಕೋರಿದ್ದರೂ ಉದ್ದೇಶಪೂರ್ವಕವಾಗಿ ಕಾನೂನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…