ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.
ಅವರು ದಾವಣಗೆರೆಯಲ್ಲಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಹಾವೇರಿ, ಕೋಲಾರ, ಮಂಡ್ಯ ಶಿವಮೊಗ್ಗ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ 14 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀಥಲೀಕರಣ ಘಟಕಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು. ಸಚಿವ ಸಂಪುಟದ ನಿರ್ಣಯಗಳ ಅನ್ವಯ ತೋಟಗಾರಿಕಾ ವಲಯಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಚಿತ್ರದುರ್ಗ, ರಾಯಚೂರು ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ತೋಟಗಾರಿಕೆ ತರಬೇತಿ ಕೇಂದ್ರ ಮತ್ತು ಬೆಳಗಾವಿ ಜಿಲ್ಲೆಯ ಅರಬಾವಿಯಲ್ಲಿ 1 ವಿದ್ಯಾರ್ಥಿ ನಿಲಯ ನಿರ್ಮಿಸಲಾಗುತ್ತಿದ್ದು ಸುಮಾರು35 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಚಿವ ಮಲ್ಲಿಕಾರ್ಜುನ ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel