ಮರ್ಯಾದ ಪುರುಷನ ಮೂಲಸ್ಥಾನ ಅಯೋಧ್ಯೆಯಲ್ಲಿ ಇನ್ನೆನು ಕೆಲವೇ ದಿನಗಳಲ್ಲಿ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಇದೀಗ ಮಂತ್ರಾಲಯದ ಹೊರವಲಯದಲ್ಲಿ ಸ್ಥಾಪಿಸಲಾಗುವ ವಿಶ್ವದ ಅತಿ ಎತ್ತರದ 108 ಅಡಿಯ ಪಂಚಲೋಹ ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿಶ್ ಶಾ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೂಮಿ ಪೂಜೆ ಮಾಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಹೈದರಾಬಾದ್ ಮೂಲದ ಜೈ ಶ್ರೀರಾಮ್ ಫೌಂಡೇಶನ್‌ನಿಂದ 300 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣವಾಗುತ್ತಿದೆ. ಗುಜರಾತ್‌ನಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ರಾಮ ಹಾಂಜಿ ಸುತಾರ್‌ಗೆ ಶ್ರೀರಾಮ ಪ್ರತಿಮೆ ತಯಾರಿಕೆ ಜವಾಬ್ದಾರಿ ನೀಡಲಾಗಿದೆ. ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ ವಿಶ್ವದಲ್ಲೇ ಅತಿ ಎತ್ತರದ ಶ್ರೀರಾಮ ಪ್ರತಿಮೆ ಮಂತ್ರಾಲಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…