Advertisement
ಪ್ರಮುಖ

#Mantralaya |ಮಂತ್ರಾಲಯದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣ | ಅಮಿತ್ ಶಾ ಅವರಿಂದ ಶಂಕುಸ್ಥಾಪನೆ

Share

ಮರ್ಯಾದ ಪುರುಷನ ಮೂಲಸ್ಥಾನ ಅಯೋಧ್ಯೆಯಲ್ಲಿ ಇನ್ನೆನು ಕೆಲವೇ ದಿನಗಳಲ್ಲಿ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಇದೀಗ ಮಂತ್ರಾಲಯದ ಹೊರವಲಯದಲ್ಲಿ ಸ್ಥಾಪಿಸಲಾಗುವ ವಿಶ್ವದ ಅತಿ ಎತ್ತರದ 108 ಅಡಿಯ ಪಂಚಲೋಹ ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿಶ್ ಶಾ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೂಮಿ ಪೂಜೆ ಮಾಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಹೈದರಾಬಾದ್ ಮೂಲದ ಜೈ ಶ್ರೀರಾಮ್ ಫೌಂಡೇಶನ್‌ನಿಂದ 300 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣವಾಗುತ್ತಿದೆ. ಗುಜರಾತ್‌ನಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ರಾಮ ಹಾಂಜಿ ಸುತಾರ್‌ಗೆ ಶ್ರೀರಾಮ ಪ್ರತಿಮೆ ತಯಾರಿಕೆ ಜವಾಬ್ದಾರಿ ನೀಡಲಾಗಿದೆ. ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ ವಿಶ್ವದಲ್ಲೇ ಅತಿ ಎತ್ತರದ ಶ್ರೀರಾಮ ಪ್ರತಿಮೆ ಮಂತ್ರಾಲಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

15 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago