ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು ದಿನಗಳಲ್ಲಿ 458 ಸ್ಥಳಗಳಲ್ಲಿ 3570 ಟನ್ ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗಿದೆ. ನಗರದಾದ್ಯಂತ 10 ದಿನಗಳ ಕಾಲ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನವು ಎಲ್ಲಾ ವಲಯಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದ್ದು, ವಲಯ ಆಯುಕ್ತರುಗಳು ಕೂಡಾ ಸ್ವಚ್ಛತಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ನಗರದ 8 ವಲಯಗಳಲ್ಲಿ 1533 ಸ್ಥಳಗಳಲ್ಲಿ ಕಟ್ಟಡ ಭಗ್ನಾವಶೇಷಗಳಿರುವ ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳ ಪೈಕಿ ಈಗಾಗಲೇ 458 ಸ್ಥಳಗಳಲ್ಲಿ ಶೇಕಡ 30 ರಷ್ಟು ಅಂದಾಜು 3570 ಟನ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಇದೇ ವೇಳೆ, ನಗರದಲ್ಲಿ ರಸ್ತೆ ಬದಿ, ಖಾಲಿ ಜಾಗಗಳಲ್ಲಿ ತ್ಯಾಜ್ಯವನ್ನು ಎಸೆಯದಂತೆ ಬಿಬಿಎಂಪಿ ಮನವಿ ಮಾಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel