ಮದುವೆ ಸೀಜನ್(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.
ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.
ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.
– ಅಂತರ್ಜಾಲ ಮಾಹಿತಿ
Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…