ಮುಂದುವರಿದ ಅಡಿಕೆ ಕಳ್ಳಸಾಗಾಣಿಕೆ | 2.5 ಕೋಟಿ ಮೌಲ್ಯದ ಅಡಿಕೆ ವಶಪಡಿಸಿಕೊಂಡಿಸಿಕೊಂಡ ಗಡಿಭದ್ರತಾ ಪಡೆ | 4 ಮಹಿಳೆಯರ ಸಹಿತ 6 ಜನರ ವಶಕ್ಕೆ ಪಡೆದ ಅಧಿಕಾರಿಗಳು |

September 1, 2024
1:03 PM

ಅಸ್ಸಾಂ ರೈಫಲ್ಸ್ ಮತ್ತೊಂದು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ ಮತ್ತು ಮೂರು ದಿನಗಳ ಅವಧಿಯಲ್ಲಿ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳೆದೊಂದು ವಾರದಿಂದ ಈಶಾನ್ಯ ರಾಜ್ಯದ ಮೂಲಕ ಅಡಿಕೆ ಕಳ್ಳಸಾಗಾಣಿಕೆಗೆ ಸತತ ಪ್ರಯತ್ನವಾಗುತ್ತಿದೆ. ಇದುವರೆಗೆ 4 ಪ್ರಕರಣ ಪತ್ತೆಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 4 ಮಹಿಳೆಯರ ಸಹಿತ 6 ಜನರನ್ನು ವಶಕ್ಕೆ ಪಡೆಯಲಾಗಿದೆ.

ಮಣಿಪುರದ ಮಾಚಿ ಮತ್ತು ಖಂಪಾಂಗ್ ಖುಲ್ಲೆನ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಅರೆಸೇನಾ ಪಡೆಯ ಸಿಬಂದಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 2.5 ಕೋಟಿ ಮೌಲ್ಯ ಬೆಲೆಯ 28.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿವೆ ಎಂದು ಹೇಳಿದೆ. ಕಾರ್ಯಾಚರಣೆಯ ವೇಳೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಆರು ಮಂದಿ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಅಡಿಕೆಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಿದೆ.

ಆ.27 ರಂದು ಅಸ್ಸಾಂ ರೈಫಲ್ಸ್‌ನ ಪಡೆಗಳು ಮಣಿಪುರದ ರಾಜ್ಯದ ಚಂದೇಲ್ ಜಿಲ್ಲೆಯಿಂದ ಬೂದು ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿತ್ತು.

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಕಳ್ಳಸಾಗಣೆಯು ಸತತವಾಗಿ ನಡೆಯುತ್ತಿದೆ. ಮಣಿಪುರ ಮತ್ತು ಮಿಜೋರಾಂನ  ಗಡಿಗಳ ಮೂಲಕ ವ್ಯಾಪಕವಾಗಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಇದನ್ನು ಭದ್ರತಾ ಪಡೆಯ ಸಿಬಂದಿಗಳು ಸತತವಾಗಿ ತಡೆಯುತ್ತಿದ್ದಾರೆ. ಈ ಕಳ್ಳಸಾಗಾಣಿಕೆಯ ಅಡಿಕೆಯು ಭಾರತಕ್ಕೆ ಪ್ರವೇಶಿಸಿದ ನಂತರ ದೇಶದ ಇತರ ಭಾಗಗಳಿಗೆ ಸಾಗಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror