ಮುಂದುವರಿದ ಮಳೆ ಆತಂಕ | ರಾಜ್ಯದಲ್ಲೂ ನಿರಂತರ ಮಳೆ | ಜನಜೀವನ ಅಸ್ತವ್ಯಸ್ತ

August 20, 2025
9:25 PM

ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಜನಜೀವನವು ಅಸ್ತವ್ಯಸ್ತವಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಜಿಲ್ಲೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಹಾನಗಲ್ ತಾಲ್ಲೂಕಿನ ಶಾಡಗುಪ್ಪಿ ಗ್ರಾಮದಲ್ಲಿ ಮನೆಯೊಂದು ಕುಸಿದಿದೆ. ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 20 ರಂದು ಜಿಲ್ಲೆಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಜಿಲ್ಲೆಯಲ್ಲಿ ಹರಿಯುವ ತುಂಗಭದ್ರಾ, ವರದಾ, ಕುಮಧ್ವತಿ ಹಾಗೂ ಧರ್ಮ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ. ಭಾರೀ ಮಳೆಯಿಂದ ರೈತರಲ್ಲಿ ಆತಂಕ ಮೂಡಿದೆ. ಹವಾಮಾನ ಇಲಾಖೆಯು ಶೀತಗಾಳಿಯ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಇಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದರು.  ಮಹಾರಾಷ್ಟ್ರದ ಕೃಷ್ಣಾಕೊಳ್ಳದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿಯಿಂದ ಹಾಗೂ ಘಟಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗುತ್ತದೆ, ಇದರಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಅಣಕಟ್ಟೆಯ ಒಳಹರಿವೂ ಹೆಚ್ಚಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುತ್ತಿರುವುದರಿಂದ ಶ್ರೀರಂಗಪಟ್ಟಣದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಶ್ರೀರಂಗಪಟ್ಟಣದ ಹಳೆಯ ಸೇತುವೆಯಾದ ವೆಲ್ಲೆಸ್ಲಿ ಬ್ರಿಡ್ಜ್ ನಲ್ಲಿ ಸಂಚಾರ ನಿರ್ಬಂಧ ಹೊರಡಿಸಿ, ಬ್ಯಾರಿಕೇಡ್ ಅಳವಡಿಸಲಾಗಿದೆ. ಮತ್ತೊಂದೆಡೆ ಶ್ರೀರಂಗಪಟ್ಟಣದ ತಗ್ಗು ಪ್ರದೇಶದ ಮನೆಗಳು, ದೇಗುಲಗಳು ಮುಳುಗಡೆಯಾಗಿದ್ದು, ಅಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಜೊತೆಗೆ ತಗ್ಗು ಪ್ರದೇಶದ ಕೃಷಿ ಭೂಮಿಗಳು ಜಲಾವೃತ್ತವಾಗಿದೆ. ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೆರಲಾಗಿದ್ದು, ದೋಣಿ ವಿಹಾರ ಸ್ಥಗಿತಗೊಂಡಿದೆ.

ದೇಶವ್ಯಾಪಿ ಮಳೆ ಹೆಚ್ಚಾಗಿದ್ದು , ದಕ್ಷಿಣ ಭಾರತ ಸೇರಿ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ. ಮುಂಬೈನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಪ್ರವಾಹ ಸೃಷ್ಟಿಯಾಗಿದೆ. ಹಿಮಾಚಲ ಪ್ರದೇಶದಲ್ಲಿ  ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟಿವೆ.ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾ, ದೆಹಲಿ ಕೂಡಾ ಮಳೆಯಾಗುವ ಸಾಧ್ಯತೆ ಇದೆ.

ಪೂಂಚ್‌ನಲ್ಲಿ ರಟ್ಟಾ ಚಾಂಬ್ ಬಳಿ ಸಂಭವಿಸಿದ ಭೂಕುಸಿತವು ಮುಘಲ್ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಭಾರೀ ಮಳೆಯಿಂದ ಉಂಟಾದ ಭೂಕುಸಿತವು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು.

ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಕುಲ್ಲು ಸತತ ಎರಡನೇ ಬಾರಿ ಮೇಘಸ್ಫೋಟ ಕಂಡಿದ್ದು, ಶಾಸ್ತ್ರಿ ನಗರದಲ್ಲಿ ಪ್ರವಾಹ ಉಂಟಾಗಿದೆ; ಮನಾಲಿ-ಚಂಡೀಗಢ ಹೆದ್ದಾರಿ ಇನ್ನೂ ವಾಹನ ಸಂಚಾರಕ್ಕೆ ತೆರವಾಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror