ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಮಲೆನಾಡು ತಪ್ಪಲು ಪ್ರದೇಶದಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಸತತ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದೆ.
ಮಲೆನಾಡು -ಕೊಡಗು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಮಲೆನಾಡು ತಪ್ಪಲು ಭಾಗವಾದ ಕೊಲ್ಲಮೊಗ್ರದಲ್ಲಿ 139 ಮಿಮೀ,ಬಾಳುಗೋಡು 162 ಮಿಮೀ, ಮಡಪ್ಪಾಡಿ 167ಮಿಮೀ, ಸುಬ್ರಹ್ಮಣ್ಯ 114 ಮಿಮೀ,ಬಳ್ಪ 128 ಮಿಮೀ, ಉಬರಡ್ಕ 178ಮಿಮೀ, ಚೆಂಬು 136 ಮಿಮೀ, ಬೆಳ್ಳಾರೆ 130 ಮಿಮೀ, ಕೋಡಿಂಬಾಳ 124 ಮಿಮೀ, , ಐವರ್ನಾಡು 162 ಮಿಮೀ, ಬೆಳ್ತಂಗಡಿ 155 ಮಿಮೀ, ಬಾಳಿಲ 133 ಮಿಮೀ, ಪುತ್ತೂರು 115ಮಿಮೀ, ಕಲ್ಲಗುಂಡಿ ಸಂಪಾಜೆ 132ಮಿಮೀ, ಬಜಗೋಳಿ 227ಮಿಮೀ, , ಸುಳ್ಯ 142 ಮಿಮೀ ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ಕಳೆದ 3 ದಿನಗಳಲ್ಲಿ 300 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಇದು ಕೃಷಿಕರೇ ಮಳೆದಾಖಲು ಮಾಡುವ ಗುಂಪಿನ ಮಾಹಿತಿ.
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಶುಕ್ರವಾರ ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆ, ಹಾಗೂ ಕರಾವಳಿ ಜಿಲ್ಲೆಗಳಿಗೆ ನಾಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆರೆಂಜ್ಅಲರ್ಟ್ ನೀಡಲಾಗಿದೆ, ಜುಲೈ 21 ರಿಂದ 23 ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 19 ರಿಂದ 23 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
Persistent rainfall persists in coastal and Malenadu regions. Over 100 mm of precipitation has been recorded in the Malenadu areas. The meteorological department predicts that heavy rainfall will continue for the next four days.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490