ಹವಾಮಾನ ವರದಿ | 19-07-2024 | ಕರಾವಳಿ-ಮಲೆನಾಡಲ್ಲಿ ಮಳೆ ಮುಂದುವರಿಕೆ | ಜು.20 ನಂತರ ಮಹಾರಾಷ್ಟ್ರದಲ್ಲಿ ಮಳೆಯಬ್ಬರ ಸಾಧ್ಯತೆ |

July 19, 2024
11:56 AM
ಜುಲೈ 20ರ ರಾತ್ರಿ ಒಡಿಸ್ಸಾಕ್ಕೆ ಪ್ರವೇಶಿಸುತ್ತಿದ್ದಂತೆಯೆ ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ.

20.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಆದರೆ ತೀವ್ರತೆ ಸ್ವಲ್ಪ ಕಡಿಮೆ ಇರಬಹುದು.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ (ತೀವ್ರತೆ ಸ್ವಲ್ಪ ಕಡಿಮೆ ಇರಬಹುದು) ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಡಿಸ್ಸಾದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಜುಲೈ 20ರ ರಾತ್ರಿ ಒಡಿಸ್ಸಾಕ್ಕೆ ಪ್ರವೇಶಿಸುತ್ತಿದ್ದಂತೆಯೆ ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror