ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಭಾರೀ ಗಾಳಿ ಮಳೆಯ ಪರಿಣಾಮವಾಗಿ ಮಂಗಳೂರು ನಗರದ ಹಲವೆಡೆ ಮರಗಳು ಧರೆಗುರುಳಿವೆ. ಬಜಪೆ ಸಮೀಪದ ಅದ್ಯಪಾಡಿ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ಸ್ಥಳೀಯ ನಿವಾಸಿಯೊಬ್ಬರ ಮನೆಯಂಗಳದಲ್ಲಿ ಮಣ್ಣು ತುಂಬಿ ಆತಂಕಕ್ಕೆ ಕಾರಣವಾಗಿತ್ತು. ಮಳೆ ಇನ್ನಷ್ಟು ಜೋರಾದರೆ ನಗರದ ಕೊಟ್ಟಾರ, ಮಾಲೆಮಾರ್, ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ದಿಶಾಂತ್ ಕೆ ಎಸ್, 4 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ಪ್ರಣಮ್ಯ ಡಿ, 5 ನೇ ತರಗತಿ, ಕೊಡಿಯಾಲಬೈಲು, ಬೆಳ್ತಂಗಡಿ |- ದ ರೂರಲ್…
ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ…
ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ…
ಕೇಂದ್ರ ಪುರಸ್ಕೃತ ಪ್ರಮುಖ ಯೋಜನೆಗಳಲ್ಲಿ ಒಂದಾದ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಬರ ಪೀಡಿತ…
ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್…