ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಸಮೀಕ್ಷೆ ಕಾರ್ಯ ಮುಂದುವರಿದಿದೆ. ರಾಜ್ಯದ 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಸಮೀಕ್ಷೆಯ ನಿಗದಿತ ಗುರಿ ಸಾಧನೆಯಲ್ಲಿ ಕೊಪ್ಪಳ ಜಿಲ್ಲೆ ಪ್ರಥಮ, ಹಾವೇರಿ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಸಮೀಕ್ಷೆ ಕಾರ್ಯದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 2 ಲಕ್ಷದ 62 ಸಾವಿರ 903 ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೂ ಶೇಕಡಾ 80.43 ರಷ್ಟು ಸಾಧನೆ ಮಾಡಲಾಗಿದೆ.ಅಂಕೋಲಾ ತಾಲ್ಲೂಕಿನಲ್ಲಿ ಸಮೀಕ್ಷೆಯು ಶೇಕಡಾ 100 ರಷ್ಟು ಪೂರ್ಣಗೊಂಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




