ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್‌ ಆರೋಪ | ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ | ತನಿಖೆಗೆ ಸಿದ್ಧ ಎಂದ ಗೃಹಸಚಿವ | ಈಶ್ವರಪ್ಪ ರಾಜೀನಾಮೆಗೆ ವಿಪಕ್ಷ ಒತ್ತಾಯ |

April 12, 2022
3:01 PM

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Advertisement
Advertisement

ಕೆಲವು ದಿನಗಳ ಹಿಂದೆ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ನಾಪತ್ತೆಯಾಗಿದ್ದರು. ಇದೀಗ ಉಡುಪಿ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಂತೋಷ್ ಪಾಟೀಲ್‌ ಅವರ ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ​​ಪ್​​ ಮೆಸೇಜ್ ಕಳುಹಿಸಿದ್ದರು ತಿಳಿದು ಬಂದಿದೆ.

Advertisement

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಾವು ಮಾಡಿದ  ಕಾಮಗಾರಿ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.

ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಿಲ್ಲ- ಈಶ್ವರಪ್ಪ
Advertisement

ಗುತ್ತಿಗೆದಾರ  ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್.​​ ಈಶ್ವರಪ್ಪ, “ಸಂತೋಷ್ ಪಾಟೀಲ್ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಅವರು ನನ್ನ ಮೇಲೆ ಕಮಿಷನ್ ಆರೋಪ ಮಾಡಿದ್ದರು. ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ ಎಂದು ಪ್ರತಿಕ್ರಿಯಿಸಿದರು.

ರಾಜಿನಾಮೆಗೆ ವಿಪಕ್ಷ ನಾಯಕರ ಒತ್ತಾಯ

ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸಚಿವ ಈಶ್ವರಪ್ಪ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕೆಎಸ್ ಈಶ್ವರಪ್ಪ ಸಚಿವ ಸ್ಥಾನದಲ್ಲಿ ಮುಂದುವರಿಯುವುದಕ್ಕೆ ಬಿಡಬಾರದು. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕೂಡಲೇ ಕ್ಯಾಬಿನೆಟ್‌ನಿಂದ ವಜಾಗೊಳಿಸಬೇಕು ಎಂದಿದ್ದಾರೆ.ಇದೊಂದು ಗಂಭೀರ ಪ್ರಕರಣವಾಗಿದೆ ಎಂದು ಹೇಳಿದ್ದಾರೆ.

Advertisement

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆಯಾಗಬೇಕು. ಮೊದಲು ಡೆತ್ ನೋಟ್ ಸಂಬಂಧ ಎಫ್‌ಐಆರ್ ದಾಖಲಾಗಬೇಕು. ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವರು ಏನೂ ಮಾಡಲ್ಲ ಅಂತ ಗೊತ್ತು. ಡಿಜಿಪಿ ರಾಜ್ಯದಲ್ಲಿ ಬದುಕಿದ್ದರೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ,” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಹೇಳಿಕೆ  ನೀಡಿದ್ದಾರೆ.
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..
May 17, 2024
4:19 PM
by: The Rural Mirror ಸುದ್ದಿಜಾಲ
ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |
May 17, 2024
3:31 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!
May 17, 2024
2:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror