ಗುತ್ತಿಗೆದಾರರ ಸಮಸ್ಯೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜನವರಿ 18 ರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ಹಾಗೂ ಸರ್ಕಾರ ಬಾಕಿ ಇರಿಸಿಕೊಂಡಿರುವ 25 ಸಾವಿರ ಕೋಟಿ ರೂ. ಕಾಮಗಾರಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಲಂಚ ಕೊಡದ ಕಾರಣಕ್ಕೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿ ಮುಗಿದಿದ್ದರೂ 25 ಸಾವಿರ ಕೋಟಿ ರೂ. ಬಿಡುಗಡೆ ಮಾಡಿಲ್ಲ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ, ನೀರಾವರಿ ಇಲಾಖೆಯಿಂದ 8 ಸಾವಿರ ಕೋಟಿ ಹಾಗೂ ಬಿಬಿಎಂಪಿಯಿಂದ 3 ಸಾವಿರ ಕೋಟಿ ರೂ. ಬಾಕಿ ಇರಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾ ಮಾಡಲಾಗುವುದು. ಗುತ್ತಿಗೆದಾರರಿಂದ ಸಚಿವರು, ಹಿರಿಯ ಅಧಿಕಾರಿಗಳು, ಶಾಸಕರು ಲಂಚ ಕೇಳಿರುವ ಆಡಿಯೋ, ವೀಡಿಯೊ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಜನವರಿ 19ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಜನವರಿ 18ರಿಂದ ಕಾಮಗಾರಿ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆಂಪಣ್ಣ ವಿವರಿಸಿದರು. 20 ಸಾವಿರಕ್ಕೂ ಅಧಿಕ ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ಅವರು ವಿವರಿಸಿದರು.
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel