ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

February 26, 2025
6:49 AM
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ.

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ, 2024-25ರ ಆರ್ಥಿಕ ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಶೇ.16 ರಷ್ಟು ಕೊಡುಗೆಯನ್ನು  ಕೃಷಿ ಕ್ಷೇತ್ರ ನೀಡಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಠಿಸಿದೆ ಎಂದು ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ ಹೇಳಿದರು.………ಮುಂದೆ ಓದಿ……..

Advertisement

ನಬಾರ್ಡ್ ವತಿಯಿಂದ ಆಯೋಜಿಸಿದ್ದ ರಾಜ್ಯ ಸಾಲ ಗೋಷ್ಠಿ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್  ಬೆಂಗಳೂರಿನಲ್ಲಿ ಉದ್ಘಾಟಿಸಿದರು. ಬಳಿಕ ಅವರು, ರಾಜ್ಯ ಮುನ್ನೋಟ ಪತ್ರ ಹಾಗೂ ಕೃಷಿ ಸಂಬಂಧಿತ ಜೀವ ಎಂಬ ಕಿರುಚಿತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ  ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್,  ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕರಾದ  ಜೋಹಿ ಸ್ಮಿತಾ ಸಿನ್ಹಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ,   ಕೃಷಿ  ಹಾಗೂ ಗ್ರಾಮೀಣ ಪರಿಸರ ವ್ಯವಸ್ಥೆ ಅಭಿವೃದ್ಧಿಗೊಳಿಸಲು ವಿಚಾರಗೋಷ್ಠಿ ಸಹಕಾರಿಯಾಗಿದೆ, ನಬಾರ್ಡ್ ಸಾಲ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳಿಂದ ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಮೌಲ ಸೌಕರ್ಯಗಳ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಹೇಳಿದರು.

ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್ ಮಾತನಾಡಿ , ಕೃಷಿ ಮತ್ತು ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲು ನಬಾರ್ಡ್ ಸಾಲ ಯೋಜನೆಗಳು ಸಹಕಾರಿಯಾಗಿವೆ, ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ ಎಂದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group