ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ, 2024-25ರ ಆರ್ಥಿಕ ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಶೇ.16 ರಷ್ಟು ಕೊಡುಗೆಯನ್ನು ಕೃಷಿ ಕ್ಷೇತ್ರ ನೀಡಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಠಿಸಿದೆ ಎಂದು ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ ಹೇಳಿದರು.………ಮುಂದೆ ಓದಿ……..
ನಬಾರ್ಡ್ ವತಿಯಿಂದ ಆಯೋಜಿಸಿದ್ದ ರಾಜ್ಯ ಸಾಲ ಗೋಷ್ಠಿ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ಬೆಂಗಳೂರಿನಲ್ಲಿ ಉದ್ಘಾಟಿಸಿದರು. ಬಳಿಕ ಅವರು, ರಾಜ್ಯ ಮುನ್ನೋಟ ಪತ್ರ ಹಾಗೂ ಕೃಷಿ ಸಂಬಂಧಿತ ಜೀವ ಎಂಬ ಕಿರುಚಿತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್, ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕರಾದ ಜೋಹಿ ಸ್ಮಿತಾ ಸಿನ್ಹಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ , ಕೃಷಿ ಹಾಗೂ ಗ್ರಾಮೀಣ ಪರಿಸರ ವ್ಯವಸ್ಥೆ ಅಭಿವೃದ್ಧಿಗೊಳಿಸಲು ವಿಚಾರಗೋಷ್ಠಿ ಸಹಕಾರಿಯಾಗಿದೆ, ನಬಾರ್ಡ್ ಸಾಲ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳಿಂದ ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಮೌಲ ಸೌಕರ್ಯಗಳ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಹೇಳಿದರು.
ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್ ಮಾತನಾಡಿ , ಕೃಷಿ ಮತ್ತು ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲು ನಬಾರ್ಡ್ ಸಾಲ ಯೋಜನೆಗಳು ಸಹಕಾರಿಯಾಗಿವೆ, ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ ಎಂದರು.
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490