ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವೈದ್ಯಾಧಿಕಾರಿ ಡಾ.ಕಿಶನ್ ರಾವ್ ಬಾಳಿಲ ಮತ್ತು ಸಿಬ್ಬಂದಿ ವರ್ಗದವರು ಸೇರಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆಯ 100 ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಮಾಹಿತಿಯನ್ನು ಡಾ.ಕಿಶನ್ ರಾವ್ ಬಾಳಿಲ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel