ಮಾರ್ಚ್ ತಿಂಗಳ ಮೊದಲ ದಿನದಂದೇ ಕೇಂದ್ರ ಸರ್‍ಕಾರ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಭಾರೀ ದರ ಏರಿಕೆಯಾಗುವ ಮೂಲಕ ಜನಸಮಾನ್ಯರಿಗೆ ಬಿಸಿ ಮುಟ್ಟಿಸಿದೆ. ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ 350.50 ಹಾಗೂ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ 50 ರೂ.ರಷ್ಟು ಹೆಚ್ಚಿಸಿವೆ.
ಪರಿಷ್ಕೃತ ದರಗಳ ಪ್ರಕಾರ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳು ದೆಹಲಿಯಲ್ಲಿ ಪ್ರತಿ ಯೂನಿಟ್‍ಗೆ 2,119.50 ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್ ಬೆಲೆ ಪ್ರತಿ ಯೂನಿಟ್‍ಗೆ 1,103 ರೂ. ಆಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 1,055.50 ರೂ. ಆಗಿದೆ.
ಈ ಎಲ್ಲಾ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿದೆ. ಈ ವರ್ಷದಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಇದು ಎರಡನೇ ಏರಿಕೆಯಾಗಿದೆ. ಇದಕ್ಕೂ ಮುನ್ನ ಜನವರಿ 1 ರಂದು ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್‍ಗೆ 25 ರೂ. ಹೆಚ್ಚಿಸಲಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel