ಗ್ರಾಹಕರಿಗೆ ಗ್ಯಾಸ್ ಶಾಕ್ : ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

March 1, 2023
1:09 PM

ಮಾರ್ಚ್ ತಿಂಗಳ ಮೊದಲ ದಿನದಂದೇ ಕೇಂದ್ರ ಸರ್‍ಕಾರ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಭಾರೀ ದರ ಏರಿಕೆಯಾಗುವ ಮೂಲಕ ಜನಸಮಾನ್ಯರಿಗೆ ಬಿಸಿ ಮುಟ್ಟಿಸಿದೆ. ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ 350.50 ಹಾಗೂ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ 50 ರೂ.ರಷ್ಟು ಹೆಚ್ಚಿಸಿವೆ.

ಪರಿಷ್ಕೃತ ದರಗಳ ಪ್ರಕಾರ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳು ದೆಹಲಿಯಲ್ಲಿ ಪ್ರತಿ ಯೂನಿಟ್‍ಗೆ 2,119.50 ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್ ಬೆಲೆ ಪ್ರತಿ ಯೂನಿಟ್‍ಗೆ 1,103 ರೂ. ಆಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ  1,055.50 ರೂ. ಆಗಿದೆ.

ಈ ಎಲ್ಲಾ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿದೆ. ಈ ವರ್ಷದಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಇದು ಎರಡನೇ ಏರಿಕೆಯಾಗಿದೆ. ಇದಕ್ಕೂ ಮುನ್ನ ಜನವರಿ 1 ರಂದು ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್‍ಗೆ 25 ರೂ. ಹೆಚ್ಚಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!
June 9, 2026
11:32 PM
by: ದ ರೂರಲ್ ಮಿರರ್.ಕಾಂ
ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ
June 9, 2026
11:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ
June 9, 2026
10:55 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ
June 9, 2026
10:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror