#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |

August 16, 2023
3:58 PM
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ.

ಪ್ರವಾಸಿಗರ ಸ್ವರ್ಗ, ಕೂಲ್ ಸಿಟಿ, ಉದ್ಯಾನನಗರಿ ಎಂದೆಲ್ಲಾ ಖ್ಯಾತಿ ಪಡೆದಿದ್ದ ನಮ್ಮ ಬೆಂಗಳೂರು ದಿನದಿಂದ ದಿನಕ್ಕೆ ಹಾಟ್‌ ಸಿಟಿಯಾಗುತ್ತಿದೆ. ಒಂದು ಕಾಲದಲ್ಲಿ ಬ್ರಿಟೀಷರು ಬೇಸಿಗೆ ಕಾಲದಲ್ಲಿ ಬೆಂಗಳೂರಿಗೆ ಬಂದು ತಂಪಿನ ವಾತಾವರಣದಲ್ಲಿ ಕಾಲ ಕಳೆದು ಹೋಗುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಯೋಚಿಸಿದ್ರೆ ಮುಂದೇನು ಗತಿ ಅನ್ನುವಂತಾಗಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ. ಆಗಸ್ಟ್‌ ತಿಂಗಳಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿ ತಾಪಮಾನಕ್ಕಿಂತ ಸದ್ಯದ ತಾಪಮಾನ ಗರಿಷ್ಠ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. IMD ಯ ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಮಳೆಯ ಕೊರತೆ ಕಾರಣ ಎಂದು ಖಚಿತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನ ಸರಾಸರಿ ಮಳೆಗೆ ಹೋಲಿಸಿದರೆ ಈ ಮಾನ್ಸೂನ್‌ನಲ್ಲಿ ಬೆಂಗಳೂರಿನಲ್ಲಿ 44 ಮಿಮೀ ಕಡಿಮೆ ಮಳೆಯಾಗಿದೆ. ಕಳೆದ ಕೆಲವು ವರ್ಷಗಳ ಸರಾಸರಿ ಮಳೆಯ ಅಂಕಿಅಂಶಗಳನ್ನು ಗಮನಿಸಿದರೆ ಜೂನ್‌ನಲ್ಲಿ ಬೆಂಗಳೂರಿನಲ್ಲಿ 262 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ ಕೇವಲ 218 ಮಿ.ಮೀ. ಮಳೆಯಾಗಿದೆ.

ಬೆಂಗಳೂರು ಮಾತ್ರವಲ್ಲ ಈ ಬಾರಿ ರಾಜ್ಯದ ಬಹುತೇಕ ಕಡೆಗಳಲ್ಲೂ ಅದೇ ಪರಿಸ್ಥಿತಿ ಇದೆ. ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗಿದೆ. ಹೀಗಾಗಿ ಹವಾಮಾನ ವೈಪರೀತ್ಯ ಕಾಡುತ್ತಿದೆ, ಎಚ್ಚರಿಕೆಯನ್ನು ಪ್ರಕೃತಿ ನೀಡುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror