ಪ್ರವಾಸಿಗರ ಸ್ವರ್ಗ, ಕೂಲ್ ಸಿಟಿ, ಉದ್ಯಾನನಗರಿ ಎಂದೆಲ್ಲಾ ಖ್ಯಾತಿ ಪಡೆದಿದ್ದ ನಮ್ಮ ಬೆಂಗಳೂರು ದಿನದಿಂದ ದಿನಕ್ಕೆ ಹಾಟ್ ಸಿಟಿಯಾಗುತ್ತಿದೆ. ಒಂದು ಕಾಲದಲ್ಲಿ ಬ್ರಿಟೀಷರು ಬೇಸಿಗೆ ಕಾಲದಲ್ಲಿ ಬೆಂಗಳೂರಿಗೆ ಬಂದು ತಂಪಿನ ವಾತಾವರಣದಲ್ಲಿ ಕಾಲ ಕಳೆದು ಹೋಗುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಯೋಚಿಸಿದ್ರೆ ಮುಂದೇನು ಗತಿ ಅನ್ನುವಂತಾಗಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ. ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿ ತಾಪಮಾನಕ್ಕಿಂತ ಸದ್ಯದ ತಾಪಮಾನ ಗರಿಷ್ಠ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. IMD ಯ ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಮಳೆಯ ಕೊರತೆ ಕಾರಣ ಎಂದು ಖಚಿತಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನ ಸರಾಸರಿ ಮಳೆಗೆ ಹೋಲಿಸಿದರೆ ಈ ಮಾನ್ಸೂನ್‌ನಲ್ಲಿ ಬೆಂಗಳೂರಿನಲ್ಲಿ 44 ಮಿಮೀ ಕಡಿಮೆ ಮಳೆಯಾಗಿದೆ. ಕಳೆದ ಕೆಲವು ವರ್ಷಗಳ ಸರಾಸರಿ ಮಳೆಯ ಅಂಕಿಅಂಶಗಳನ್ನು ಗಮನಿಸಿದರೆ ಜೂನ್‌ನಲ್ಲಿ ಬೆಂಗಳೂರಿನಲ್ಲಿ 262 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ ಕೇವಲ 218 ಮಿ.ಮೀ. ಮಳೆಯಾಗಿದೆ.
ಬೆಂಗಳೂರು ಮಾತ್ರವಲ್ಲ ಈ ಬಾರಿ ರಾಜ್ಯದ ಬಹುತೇಕ ಕಡೆಗಳಲ್ಲೂ ಅದೇ ಪರಿಸ್ಥಿತಿ ಇದೆ. ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗಿದೆ. ಹೀಗಾಗಿ ಹವಾಮಾನ ವೈಪರೀತ್ಯ ಕಾಡುತ್ತಿದೆ, ಎಚ್ಚರಿಕೆಯನ್ನು ಪ್ರಕೃತಿ ನೀಡುತ್ತಿದೆ.
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…