Advertisement
MIRROR FOCUS

ಮಹಿಳೆಯರ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್, ಲೇಬಲ್ ಬಗ್ಗೆ ತರಬೇತಿಗೆ ಸಹಕಾರ

Share

ಸಂಜೀವಿನಿ ವಿವಿಧ ಸ್ವಸಹಾಯ ಸಂಘದ ಗ್ರಾಮೀಣ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟವು ಮಹಿಳೆಯರನ್ನು ಆರ್ಥಿಕ  ಸಬಲರನ್ನಾಗಿಸಲು  ಸಹಕರಿಸುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು  ಅವರ  ಉತ್ಪನ್ನಗಳ ಮಾರಾಟಕ್ಕೆ   ಉತ್ತೇಜನ  ನೀಡಲಾಗುತ್ತದೆ ಎಂದು ದ ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ ವಿನಾಯಕ ಕಾರ್ಬಾರಿ ಹೇಳಿದರು.

ಅವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ,     ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಮಂಗಳೂರು ತಾಲೂಕು ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ   ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಸೋಮವಾರ  ನಡೆದ ಗಣೇಶ ಹಬ್ಬದ ವಿಶೇಷ ಸಂಜೀವಿನಿ ಮಾಸಿಕ ಸಂತೆ  ವಸ್ತು ಪ್ರದರ್ಶನ ಮತ್ತು ಮಾರಾಟ   ಮೇಳ ಉದ್ಘಾಟಿಸಿ ಮಾತನಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಯಿಂದ ಎನ್.ಆರ್.ಎಲ್.ಎಮ್  ಸಂಜೀವಿನಿ ಒಕ್ಕೂಟದ ಸ್ತ್ರೀಯರು ಆಗಮಿಸಿದ್ದು, ಇನ್ನು ಮುಂದೆಯೂ ಒಕ್ಕೂಟದ ಮಹಿಳೆಯರಿಗೆ ಅವರವರ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಬ್ರ್ಯಾಂಡಿಂಗ್, ಲೇಬಲ್ ಮುಂತಾದದರ ಬಗ್ಗೆ ತರಬೇತಿ ಸೇರಿದಂತೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.  ಈ ರೀತಿಯ ಮಾರಾಟ ಮೇಳಗಳನ್ನು ಆಯೋಜಿಸುವುದರಿಂದ  ಮಹಿಳೆಯರು   ತಾವು ಕರಗತ ಮಾಡಿಕೊಂಡ ಕೌಶಲ್ಯದಿಂದ   ಉತ್ಪಾದಿಸಿದ ಉತ್ಪನ್ನಗಳಿಂದ ಹೆಚ್ಚಿನ ಆದಾಯ ಗಳಿಸಬಹುದು ಎಂದು ಅವರು ಹೇಳಿದರು.

ಮಾರಾಟ   ಮಳಿಗೆಗಳಲ್ಲಿ ಉತ್ತಮ ಗುಣಮಟ್ಟದ ಆಯುರ್ವೇದಿಕ್ ಉತ್ಪನ್ನಗಳು, ಗೃಹ ಬಳಕೆ ವಸ್ತುಗಳು, ಕೃತಕ ಆಭರಣ, ಉಡುಪುಗಳು, ಅಲಂಕಾರ ವಸ್ತುಗಳು, ಮಹಿಳೆಯರು  ಸ್ವತಃ ತಯಾರಿಸಿದ ಉಪ್ಪಿನಕಾಯಿ, ಹಪ್ಪಳ ಮುಂತಾದ ಆಹಾರ ಪದಾರ್ಥಗಳು, ಕರಕುಶಲ ಉತ್ಪನ್ನಗಳು ನೋಡುಗರ ಕಣ್ಸೆಳೆಯಿತು.

Advertisement

ಈ ಸಂದರ್ಭದಲ್ಲಿ  ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಜಯರಾಂ,   ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ  ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕ  ಮಹೇಶ್ ಅಂಬೆಕಲ್ ಕಾರ್ಯಕ್ರಮ ನಿರೂಪಿಸಿದರು.  ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಪರಮೇಶ್ವರ್ ವಂದಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

8 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

9 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

17 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

18 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

18 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

18 hours ago