ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಈ ಮೊದಲಿನ ಪ್ರಮಾಣದಲ್ಲೇ ಸಾಲ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಸುಮಾರು 63 ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ, ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳ ಕೃಷಿ ಸಾಲ, ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದ್ದು, ಕೃಷಿ ಕ್ಷೇತ್ರದ ಹಿನ್ನಡೆಗೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel