Advertisement
ರಾಜ್ಯ

ಕೊರೋನಾ ಬಗ್ಗೆ ಇರಲಿ ಎಚ್ಚರ | ಲಾಕ್ಡೌನ್‌ ಬಗ್ಗೆ ಈಗ ಭಯವಿಲ್ಲ | ಮಾಸ್ಕ್‌ ಧರಿಸುವುದು ಇನ್ನು ಕಡ್ಡಾಯ

Share

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ರಾಜ್ಯದಲ್ಲಿ  ಕೊರೋನಾ ಬಗ್ಗೆ ತೀರಾ ಎಚ್ಚರ ಅಗತ್ಯವಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಯಾವುದೇ ಲಾಕ್​ಡೌನ್ ಇರುವುದಿಲ್ಲ ಎಂದು ಹೇಳಿದ್ದಾರೆ.

ಈಗ ಮತ್ತೆ  ಕೊರೋನಾ ಬಗ್ಗೆ ಭಯ ಸೃಷ್ಠಿಸುವುದು ಬೇಡ, ಲಸಿಕೆ ಪಡೆಯಲು ಸಿದ್ಧವಿದೆ, ಕೊರತೆ ಆಗದಂತೆ ಪೂರೈಸಲು ಸರಕಾರ ಸಿದ್ಧವಿದೆ ಎಂದ ಯಡಿಯೂರಪ್ಪ, ಕೊರೋನಾ ಪರೀಕ್ಷೆ ಹೆಚ್ಚಳ ಹಾಗೂ 42 ಆಸ್ಪತ್ರೆಯಲ್ಲಿ ಚಿಕಿತ್ಸೆ, ಕಡ್ಡಾಯವಾಗಿ ಮಾಸ್ಕ್ ಬಳಕೆ, ಪ್ರಕರಣ ಹೆಚ್ಚಿರುವ ಜಿಲ್ಲೆಯಲ್ಲಿ ಟೆಸ್ಟ್ ಹೆಚ್ಚೆಸಲು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಬಿಎಸ್​ವೈ ಹೇಳಿದರು. ಕಲ್ಬುರ್ಗಿ, ಬೆಂಗಳೂರಿಗೆ ಹೆಚ್ಚು ಒತ್ತು ನೀಡಲಾಗಿದೆ. ಮೂರನೇ ಹಂತದ ಪಟ್ಟಣಗಳಿಗೂ ಟೆಸ್ಟ್ ಹೆಚ್ಚಿಸಲು ಸೂಚನೆ ನೀಡಲಾಗಿದೆ. ವ್ಯಾಕ್ಸಿನ್ ವೇಸ್ಟ್ ಆಗದಂತೆ ಕ್ರಮ ಕೈಗೊಳ್ಳುವುದು. ಹಳೆಯದನ್ನ ಖಾಲಿ ಮಾಡಿ, ಹೊಸತನ್ನು ಬಳಸಿಕೊಳ್ಳುವುದು ಎಂದು ಯಡಿಯೂರಪ್ಪ  ತಿಳಿಸಿದ್ದಾರೆ.

ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಿನಿಮಾ, ಹೋಟೆಲ್ ಮತ್ತೆಲ್ಲಾದ್ರೂ ಮಾಸ್ಕ್ ಬಳಕೆ ಕಡ್ಡಾಯ ಎಂದು ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

8 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago