ದ ಕ ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಹೇಗೆ ? | ಗೊಂದಲ ಬೇಡವೆಂದ ಜಿಲ್ಲಾ ಉಸ್ತುವಾರಿ ಸಚಿವರು..!

March 30, 2021
10:07 PM

ಕೊರೋನಾ ನಿಯಮಾವಳಿಗಳು ದ ಕ ಜಿಲ್ಲೆಯಲ್ಲಿ ಹೇಗೆ ? ಹೀಗೊಂದು ಗೊಂದಲದ ಚರ್ಚೆ ಆರಂಭವಾಗಿದೆ. 

Advertisement
Advertisement
Advertisement

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಲಾಗಿತ್ತು.

Advertisement

ಅದಾಗಿ ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ , ಕೋಲ ,ನೇಮ ,ಪೂಜೆ , ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್  ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು  ಸ್ಪಷ್ಟನೆ ನೀಡಿದ್ದಾರೆ.

ಈಗ ಜನಸಾಮಾನ್ಯರಲ್ಲಿ ಇರುವ ಪ್ರಶ್ನೆ, ಕೋವಿಡ್‌ ನಿಯಮ ಯಾವುದು ?

Advertisement

ದಕ ಜಿಲ್ಲಾಧಿಕಾರಿಯವರು  ಈಗಾಗಲೇ ಆದೇಶ ಮಾಡಿದಂತೆ, ಮುಂಬರುವ ಧಾರ್ಮಿಕ ಹಬ್ಬಗಳಾದ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೈ ಡೇ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆ ನಡೆಸುವುದನ್ನು, ಜಾತ್ರೆ,ಮೇಳಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಕೋವಿಡ್ ನಿಯಮಾವಳಿ ಪಾಲಿಸಬೇಕು. ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು. ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಗುಂಪಾಗಿ ಹೆಚ್ಚು ಸೇರುವಂತಹ ಜಾತ್ರೆ, ಮೇಳ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮುಂದಿನ ಸೂಚನೆಯ ವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸ ಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಅದಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಕೋವಿಡ್‌ ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ.ಕ.ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು , ಮರುಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ , ಕೋಲ ,ನೇಮ ,ಪೂಜೆ , ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೊವಿಡ್ -19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ . ಬಯಲು, ಮೈದಾನ ಪ್ರದೇಶದಲ್ಲಿ ಗರಿಷ್ಟ 500 ಜನಕ್ಕಿಂತ ಜಾಸ್ತಿ ಸೇರುವಂತಿಲ್ಲ . ಕಡ್ಡಾಯವಾಗಿ ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

ಜನಸಾಮಾನ್ಯರಲ್ಲಿ  ಈಗಾಗಲೇ ಇರುವ ಆತಂಕ ಏನೆಂದರೆ ಜಾತ್ರೆ ಹಾಗೂ ನೇಮ, ಕೋಲಗಳದ್ದು. ತುಳುನಾಡು ದೈವಗಳ ಆರಾಧನೆ ಪ್ರದೇಶ. ಇಲ್ಲಿ ಪ್ರತೀ ವರ್ಷವೂ ಕೂಡಾ ದೈವಗಳ ನೇಮ ನಡೆಯುವ ಸ್ಥಳಗಳು ಇರುತ್ತದೆ. ಇಂತಹ ಕಡೆಗಳಲ್ಲಿ ಕಳೆದ ವರ್ಷವೂ ನೇಮ, ಕೋಲ ನಡೆಯಲಿಲ್ಲ. ಈ ಬಾರಿಯೂ ನಡೆಯದೇ ಇದ್ದರೆ ಹೇಗೆ ? ನಂಬಿಕೆಯ ಜಾತ್ರೆಗಳು ನಡೆಯುವುದು  ಹೇಗೆ ಎಂಬ ಪ್ರಶ್ನೆ ಇದೆ. ಹೀಗಾಗಿ ಈ ಗೊಂದಲಗಳ ನಿವಾರಣೆಯಾಗಬೇಕಿದೆ. ಅದರ ಜೊತೆಗೆ ಯಕ್ಷಗಾನಗಳು ಈ ನೆಲದ ಕಲೆಯಾಗಿದೆ. ಅನೇಕ ಕಲಾವಿದರಿಗೆ ಯಕ್ಷಗಾನವೇ ಆಧಾರವಾಗಿರುತ್ತದೆ. ಇಂತಹವರಿಗೆ ಪರ್ಯಾಯ ವ್ಯವಸ್ಥೆ ಏನು ಇತ್ಯಾದಿ ಪ್ರಶ್ನೆಗಳ ನಡುವೆಯೂ ಕೊರೋನಾ ನಿಯಂತ್ರಣ ಮಾಡಬೇಕಿರುವುದು  ಇಂದಿನ ಸವಾಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror