ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ 6 ರವರೆಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ರೆಸ್ಟೋರೆಂಟ್‌ಗಳು, ಬಾರ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನುಏಳು ದಿನಗಳವರೆಗೆ ಸಂಪೂರ್ಣವಾಗಿ ಮುಚ್ಚಲು ನಿರ್ಧರಿಸಲಾಗಿದೆ ಎಂದು ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ. ಆಹಾರ ಪಾರ್ಸೆಲ್ ಮತ್ತು ವಿತರಣಾ ಸೇವೆಗಳನ್ನು ಒದಗಿಸಲು ರೆಸ್ಟೋರೆಂಟ್‌ಗಳಿಗೆ ಅವಕಾಶ ನೀಡಲಾಗಿದೆ.
ಶನಿವಾರದಿಂದ ಜಾರಿಗೆ ಬರಲಿರುವ ಈ ಪರಿಷ್ಕರಣೆಗಳನ್ನು ಮುಂದಿನ ಶುಕ್ರವಾರ ಏಪ್ರಿಲ್ 9 ರಂದು ಪರಿಶೀಲಿಸಲಾಗುವುದು ಎಂದು ರಾವ್ ತಿಳಿಸಿದ್ದಾರೆ. ವಾರಗಳಿಗೊಮ್ಮೆ ಪರಿಷ್ಕರಣೆಗಳು ನಡೆಯುತ್ತಿವೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…