ಕೊರೋನಾ ಅಬ್ಬರ ಹೆಚ್ಚುತ್ತಿದೆ. ನಗರ ಪ್ರದೇಶ ಮಾತ್ರವಲ್ಲ ಹಳ್ಳಿಗಳಲ್ಲೂ ಕೊರೋನಾ ಭಯ ಹೆಚ್ಚಿದೆ. ಇದಕ್ಕಾಗಿ ಎಲ್ಲೆಡೆಯೂ ಎಚ್ಚರ ಅಗತ್ಯವಾಗಿದೆ. ಈ ಕಾರಣದಿಂದ ದ ಕ ಜಿಲ್ಲಾಧಿಕಾರಿಗಳಿ ಡಾ.ರಾಜೇಂದ್ರ ಕೆ ವಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ಸಾರ್ವಜನಿಕ ಸಮಾರಂಭ ಆಚರಣೆಗಳು, ಕಾರ್ಯಕ್ರಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನಿರ್ದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನೋರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು – ತೆರೆದ ಪ್ರದೇಶಗಳಲ್ಲಿ 200 ಜನರು ಹಾಗೂ ಕಲ್ಯಾಣ ಮಂಟಪ, ಸಭಾಂಗಣ, ಹಾಲ್‍ಗಳು ಇತ್ಯಾದಿ ಮುಚ್ಚಿದ ಸ್ಥಳಗಳಲ್ಲಿ 100 ಜನರು ಪಾಲ್ಗೊಳ್ಳಬಹುದು. ಜನ್ಮ ದಿನ ಹಾಗೂ ಇತರೆ ಆಚರಣೆಗಳು ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ನಿಧನ ಅಥವಾ ಶವಸಂಸ್ಕಾರ ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ಅಂತ್ಯ ಕ್ರಿಯೆಗೆ 25 ಜನರು ಹಾಗೂ ಇತರೆ ಸಮಾರಂಭಗಳಿಗೆ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ 25 ಜನರು ಮತ್ತು ರಾಜಕೀಯ ಆಚರಣೆ ಹಾಗೂ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 200 ಜನರು ಪಾಲ್ಗೊಳ್ಳಬಹುದು ಹಾಗೂ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ.
ಜಿಲ್ಲೆಯಲ್ಲಿ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು, ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕ ಸಮಾರಂಭ ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಪಾಸ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.
ಜನರು ಕಡ್ಡಾಯವಾಗಿ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‍ಗಳು ಮತ್ತು ಆಚರಣೆಗಾಗಿ ಜನಸೇರುವ ಇತರೆ ಪ್ರದೇಶಗಳ ಉಸ್ತುವಾರಿ ಹೊಂದಿರುವವರು ಕಡ್ಡಾಯವಾಗಿ ಸ್ಯಾನಿಟೈಸೇಷನ್ ಕ್ರಮಗಳನ್ನು ಅನುಸರಿಸಬೇಕು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…