ಕೊರೋನಾ ವೈರಸ್ ಹರಡುವುದು ತಡೆಗೆ ದ ಕ ಜಿಲ್ಲಾಡಳಿತ ನಾಳೆಯಿಂದ (ಮೇ.7) ರಿಂದ ಕಾನೂನು ಕ್ರಮ ಬಿಗಿಗೊಳಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು ಅನಗತ್ಯ ಓಡಾಟ ನಡೆಸಿದರೆ ವಾಹನ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ವಿಶೇಷ ಸಭೆ ಗುರುವಾರ ನಡೆಯಿತು.
Advertisement
ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಲು ಸಲಹೆ ನೀಡಲಾಗಿದೆ. ರಸ್ತೆಗಳಲ್ಲಿ ಅನಗತ್ಯ ವಾಹನ ಓಡಾಡುವುದಕ್ಕೆ ಅವಕಾಶ ಇಲ್ಲ. ಅನಗತ್ಯ ಓಡಾಟ ನಡೆಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ನೀಡಲಾಗುತ್ತಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳೂ ರದ್ದು ಮಾಡಲು ಮನವಿ ಮಾಡಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement