ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದೆ. ಇದರ ಜೊತೆಗೇ ಮೃತಪಟ್ಟವರ ಸಂಖ್ಯೆಯೂ ಏರಿಕೆ ಕಂಡಿದೆ. ಈ ಬಗ್ಗೆ ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಮೃತಪಟ್ಟವರಲ್ಲಿ ಶೇ.70 ರಷ್ಟು ಪುರುಷರಾಗಿದ್ದು ಶೇ 30 ರಷ್ಟು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಕೊರೋನಾದಿಂದ 1,09,856 ಮಂದಿ ಮೃತಪಟ್ಟಿದ್ದು 60 ವರ್ಷಕ್ಕಿಂತ ಕಡಿಮೆ ವಯಸ್ಸಿನ 51,632 ಜನರು ಮೃತಪಟ್ಟಿದ್ದಾರೆ. ಇನ್ನು 17 ವರ್ಷದೊಳಗಿನ ಶೇಕಡ 1ರಷ್ಟು, 18 ರಿಂದ 25 ವರ್ಷದೊಳಗಿನ ಶೇಕಡ 1ರಷ್ಟು ಮಂದಿ ಮೃತಪಟ್ಟಿದ್ದಾರೆ. 26 ರಿಂದ 44 ವರ್ಷ ವಯಸ್ಸಿನ ಶೇಕಡ 10 ರಷ್ಟು ಮಂದಿ ಮೃತಪಟ್ಟಿದ್ದಾರೆ. ಕೊರೋನಾ ಸೋಂಕು ತಗಲುವ ಮುನ್ನವೇ ಬೇರೆ ಕಾಯಿಲೆ ಇದ್ದವರಿಗೆ ಕೊರೋನಾ ಸೋಂಕು ಹೆಚ್ಚಿನ ಪರಿಣಾಮ ಉಂಟುಮಾಡಿದೆ ಎಂದು ವರದಿ ಹೇಳಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…