ಕೊರೋನಾ ಬ್ರೇಕ್‌ | ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ | ರಾಜ್ಯಾದ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿ |

April 20, 2021
9:55 PM

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಬಿಡುಗಡೆಗೊಳಿಸಿದೆ. ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ  ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4 ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಪಾರ್ಸಲ್ ಗೆ ಅವಕಾಶ ನೀಡಲಾಗಿದೆ ಎಂದರು. ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ ಎಂದರು. ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಎಲ್ಲಾ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror